ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರದಲ್ಲಿ ಖಾಲಿ ಇರುವ 39 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 18,2021 ರಿಂದ ಜನವರಿ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KMF VIMUL ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :
ಸಹಾಯಕ ವ್ಯವಸ್ಥಾಪಕರು - 5 ಹುದ್ದೆಗಳು
ಸಿಸ್ಟ್ಂ ಅಧಿಕಾರಿ - 1 ಹುದ್ದೆ
ತಾಂತ್ರಿಕ ಅಧಿಕಾರಿ - 2 ಹುದ್ದೆಗಳು
ಮಾರುಕಟ್ಟೆ ಅಧೀಕ್ಷಕರು - 1 ಹುದ್ದೆ
ವಿಸ್ತರಣಧಿಕಾರಿ - 8 ಹುದ್ದೆಗಳು
ಮಾರುಕಟ್ಟೆ ಸಹಾಯಕರು - 2 ಹುದ್ದೆಗಳು
ಕೆಮಿಸ್ಟ್ ದರ್ಜೆ - 2 ಹುದ್ದೆಗಳು
ಆಡಳಿತ ಸಹಾಯಕ - 1 ಹುದ್ದೆ
ಲೆಕ್ಕ ಸಹಾಯಕರು - 4 ಹುದ್ದೆಗಳು
ಕಿರಿಯ ಸಿಸ್ಟ್ಂ ಆಪರೇಟರ್ - 2 ಹುದ್ದೆಗಳು
ಕಿರಿಯ ತಾಂತ್ರಿಕ - 2 ಹುದ್ದೆಗಳು
ಹಾಲು ರವಾನೆಗಾರರು - 4 ಹುದ್ದೆಗಳು
ಒಟ್ಟು 39 ಹುದ್ದೆಗಳು
KMF VIMUL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿಎಸ್ಸಿ ಪದವಿ, ಬಿ.ಎಸ್ಸಿ ಪದವಿ, ಬಿ.ಇ, ಬಿಬಿಎ/ಬಿಬಿಎಂ/ಬಿ.ಕಾಂ/ಬಿ.ಎಸ್ಸಿ, ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ, ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.
KMF VIMUL ನೇಮಕಾತಿ 2021 ವಯೋಮಿತಿ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.
KMF VIMUL ನೇಮಕಾತಿ 2021 ವೇತನ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ ಇಲ್ಲಿದೆ.
ಸಹಾಯಕ ವ್ಯವಸ್ಥಾಪಕರು - 52,650/- ರಿಂದ 97,100/-ರೂ
ಸಿಸ್ಟ್ಂ ಅಧಿಕಾರಿ - 43,100/- ರಿಂದ 83,900/-ರೂ
ತಾಂತ್ರಿಕ ಅಧಿಕಾರಿ - 43,100/- ರಿಂದ 83,900/-ರೂ
ಮಾರುಕಟ್ಟೆ ಅಧೀಕ್ಷಕರು - 40,900/- ರಿಂದ 78,200/-ರೂ
ವಿಸ್ತರಣಧಿಕಾರಿ - 33,450/- ರಿಂದ 62,600/-ರೂ
ಮಾರುಕಟ್ಟೆ ಸಹಾಯಕರು - 27,650/- ರಿಂದ 52,650/-ರೂ
ಕೆಮಿಸ್ಟ್ ದರ್ಜೆ - 27,650/- ರಿಂದ 52,650/-ರೂ
ಆಡಳಿತ ಸಹಾಯಕ - 27,650/- ರಿಂದ 52,650/-ರೂ
ಲೆಕ್ಕ ಸಹಾಯಕರು - 27,650/- ರಿಂದ 52,650/-ರೂ
ಕಿರಿಯ ಸಿಸ್ಟ್ಂ ಆಪರೇಟರ್ - 27,650/- ರಿಂದ 52,650/-ರೂ
ಕಿರಿಯ ತಾಂತ್ರಿಕ - 21,400/- ರಿಂದ 42,000/-ರೂ
ಹಾಲು ರವಾನೆಗಾರರು - - 21,400/- ರಿಂದ 42,000/-ರೂ
KMF VIMUL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕಿರಿಯ ತಾಂತ್ರಿಕರು ಮತ್ತು ಹಾಲು ರವಾನೆಗಾರ ವೃಂದದ ಹುದ್ದೆಗಳಿಗೆ ಪ್ರತ್ಯೇಕ ಲಿಖಿತ ಪರೀಕ್ಷೆ ಇರುತ್ತದೆ.
KMF VIMUL ನೇಮಕಾತಿ 2021 ಅರ್ಜಿ ಶುಲ್ಕ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.
KMF VIMUL ನೇಮಕಾತಿ 2021 ಅರ್ಜಿ ಸಲ್ಲಿಕೆ :
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bamulnandini.coop/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 18,2021 ರಿಂದ ಜನವರಿ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಖುದ್ದಾಗಿ/ಅಂಚೆ/ಕೊರಿಯರ್ ಮೂಲಕಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











