28 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ...ಮಾ.19ರೊಳಗೆ ಅರ್ಜಿ ಹಾಕಿ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಹಾಗೂ ಪೆರಿಫೆರಲ್ ಕ್ಯಾನ್ಸರ್ ಕೇಂದ್ರ, ಕಲ್ಬುರ್ಗಿ ಯಲ್ಲಿ ಖಾಲಿ ಇರುವ 28 ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಮಾರ್ಚ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

28 ಬೋಧಕ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ
Organisation ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (ಕೆಎಂಐಓ)
Educational Qualification ಎಂಬಿಬಿಎಸ್/ ಎಂಡಿ /ಎಂಎಸ್/ಎಂ.ಸಿಹೆಚ್ ಮತ್ತು ಡಿಎನ್‌ಎಂ/ಸ್ನಾತಕೋತ್ತರ ಪದವಿ
Job Location ಬೆಂಗಳೂರು, ಕಲ್ಬುರ್ಗಿ- ಕರ್ನಾಟಕ
Salary Scale ಅಸೋಸಿಯೇಟ್ ಪ್ರೊಫೆಸರ್- ತಿಂಗಳಿಗೆ 37,400/- ರಿಂದ 67,000/-ರೂ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ -ತಿಂಗಳಿಗೆ 15,600/- ರಿಂದ 39,100/-ರೂ
Application Start Date February 18, 2020
Application End Date March 19, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಬಿಎಸ್/ ಎಂಡಿ /ಎಂಎಸ್/ಎಂ.ಸಿಹೆಚ್ ಮತ್ತು ಡಿಎನ್‌ಎಂ /ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಅನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/- ರಿಂದ 67,000/-ರೂ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 5000/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 2000/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kmio.org/admin_index_1.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 19,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ನಿರ್ದೇಶಕರು,
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ,
ಡಾ. ಎಂ.ಹೆಚ್ ಮರಿಗೌಡ ರಸ್ತೆ,
ಬೆಂಗಳೂರು -560029.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Kidwai Memorial Institute of Oncology (KMIO) recruitment 2020 notification has been released on official website for the recruitment of 28 professor posts. Interested candidates can apply before 19th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+