DCC Bank: ಕೊಡಗು ಡಿಸಿಸಿ ಬ್ಯಾಂಕ್ ನೇಮಕಾತಿ...ಫೆ.26ರೊಳಗೆ ಅರ್ಜಿ ಹಾಕಿ

41 ಪ್ರಧಾನ ವ್ಯವಸ್ಥಾಪಕರು,ಕಿರಿಯ ಸಹಾಯಕರು,ವಾಹನ ಚಾಲಕರು ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿಯಮಿತದಲ್ಲಿ 41 ಪ್ರಧಾನ ವ್ಯವಸ್ಥಾಪಕರು,ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೊಡಗಿನ ಡಿಸಿಸಿ ಬ್ಯಾಂಕ್‌ನಲ್ಲಿ 41 ಹುದ್ದೆಗಳಿವೆ

CRITERIA DETAILS
Name Of The Posts ಪ್ರಧಾನ ವ್ಯವಸ್ಥಾಪಕರು,ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್
Organisation ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿಯಮಿತ
Educational Qualification ಎಂ.ಬಿ.ಎ /ಎಂ.ಕಾಂ, ವಾಣಿಜ್ಯೇತರ ಪದವಿ/ವಾಣಿಜ್ಯ ಪದವಿ,ಎಸ್‌ಎಸ್‌ಎಲ್‌ಸಿ
Job Location ಕೊಡಗು ಜಿಲ್ಲೆ (ಕರ್ನಾಟಕ)
Salary Scale ಪ್ರಧಾನ ವ್ಯವಸ್ಥಾಪಕರು-ತಿಂಗಳಿಗೆ 52,650/- ರಿಂದ 97,100/-ರೂ, ಕಿರಿಯ ಸಹಾಯಕರು- ತಿಂಗಳಿಗೆ 30,350/-ರಿಂದ 58,250/-ರೂ, ವಾಹನ ಚಾಲಕರು-ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಅಟೆಂಡರ್ -ತಿಂಗಳಿಗೆ 23,500/-ರಿಂದ 47,650/-ರೂ
Application Start Date February 12, 2020
Application End Date February 26, 2020

ಹುದ್ದೆಗಳ ವಿವರ:

ಪ್ರಧಾನ ವ್ಯವಸ್ಥಾಪಕರು-1 ಹುದ್ದೆ
ಕಿರಿಯ ಸಹಾಯಕರು- 26 ಹುದ್ದೆಗಳು
ವಾಹನ ಚಾಲಕರು- 2 ಹುದ್ದೆಗಳು ಮತ್ತು
ಅಟೆಂಡರ್- 12 ಹುದ್ದೆಗಳು
ಒಟ್ಟು- 41 ಹುದ್ದೆಗಳು

ವಿದ್ಯಾರ್ಹತೆ:

ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂ.ಬಿ.ಎ ಅಥವಾ ಎಂ.ಕಾಂ ಸ್ನಾತಕೋತ್ತರ ಪದವಿ, ಕಿರಿಯ ಸಹಾಯಕರು ಹುದ್ದೆಗಳಿಗೆ ಶೇ.55% ರಷ್ಟು ಅಂಕಗಳೊಂದಿಗೆ ವಾಣಿಜ್ಯೇತರ ಪದವಿ ಅಥವಾ ಶೇ.50%ರಷ್ಟು ಅಂಕಗಳೊಂದಿಗೆ ವಾಣಿಜ್ಯ ಪದವಿ, ವಾಹನ ಚಾಲಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕಕ್ಕೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35, ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ, ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ಕನಿಷ್ಟ 50 ರಿಂದ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಹಾಗೂ ಸರ್ಕಾರಿ ಆದೇಶದ ಅನುಸಾರ ಅಂಗವಿಕಲರು ಮತ್ತು ವಿಧವೆಯರಿಗೆ 10 ವರ್ಷ ಮತ್ತು ಮಾಜಿ ಸೈನಿಕರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನದ ವಿವರ:

ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ, ಕಿರಿಯ ಸಹಾಯಕರು ಹುದ್ದೆಗಳಿಗೆ ತಿಂಗಳಿಗೆ 30,350/-ರಿಂದ 58,250/-ರೂ, ವಾಹನ ಚಾಲಕರು ಹುದ್ದೆಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಅಟೆಂಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/-ರಿಂದ 47,650/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು 1,500/-ರೂ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಯಲ್ಲಿ ಪಾವತಿಸಿ ಚಲನ್‌ ಅನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಬೇಕಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಫೆಬ್ರವರಿ 27,2020 ಕೊನೆಯ ದಿನವಾಗಿರುತ್ತದೆ.
ಡಿ.ಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್‌ http://www.kodagudccbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸಹಾಯವಾಣಿ: 08272-229691/224805

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Kodagu district co operative central bank limited recruitment 2020 notification has been released on official website for the recruitment of 41 manager,driver and attender posts. Interested candidates can apply through online before 26th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+