ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಕೊಡಗು ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 31.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಪೊನ್ನಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಕೊಡಗು ಜಿಲ್ಲಾ ಅಂಗನವಾಡಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
Organisation ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
Educational Qualification SSLC, 9ನೇ ತರಗತಿ
Job Location ಕೊಡಗು ಜಿಲ್ಲೆ (ಕರ್ನಾಟಕ)
Salary Scale ಅಂಗನವಾಡಿ ಸಹಾಯಕಿಗೆ -.4000/-ರೂ.,ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.8000/-
Application Start Date March 2, 2019
Application End Date March 31, 2019

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ಅಂಕಗಳಿಸಿದ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ). ಒಂದೇ ವಿದ್ಯಾರ್ಹತೆಯುಳ್ಳ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಹೆಚ್ಚು ಅಂಕಗಳಿಸಿದವರನ್ನು ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಆಯ್ಕೆಯಾದ ಅಂಗನವಾಡಿ ಸಹಾಯಕಿಗೆ ಮಾಹೆಯಾನ 4000/-ರೂ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.8000/-ಗೌರವಧನ ಪಾವತಿಸಲಾಗುವುದು.

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಕಲಚೇತನ ಅಭ್ಯರ್ಥಿಗಳು 45 ವಯೋಮಿತಿಯೊಳಗಿರಬೇಕು.

ಆಯ್ಕೆ ಮಾಡುವ ಬಗ್ಗೆ:

ಕರ್ನಾಟಕ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ / ಮುಕ್ತ ವಿದ್ಯಾಲಯಗಳಲ್ಲಿ ಎಸ್‌.ಎಸ್‌.ಎಲ್.ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ /ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿಸ ಮತ್ತು ಸಮಾಜ ಶಾಸ್ತ್ರ / ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು, ಪ್ರಮಾಣ ಪತ್ರ / ಅಂಖಗ ಪಟ್ಟಿಯು ಗರಿಷ್ಟ 625, ಕನಿಷ್ಟ 219 ಅಂಕಗಳನ್ನು ಹೊಂದಿದ್ದಲ್ಲಿ, ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ವಿಧವೆಯರ ಆಯ್ಕೆ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ವಿಧವೆಯರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ವಿಧವೆಯರನ್ನೇ ಆಯ್ಕೆ ಮಾಡಲಾಗುತ್ತದೆ. ಆದರೆ ಎಸ್ ಎಸ್ ಎಲ್ ಸಿ ಉತ್ತೀರ್ಣ, ಸ್ಥಳೀಯರು ಮತ್ತು ವಯೋಮಿತಿಯೊಳಗಿರಬೇಕಾಗಿರುವುದು ಕಡ್ಡಾಯ. ಅರ್ಜಿ ಸಲ್ಲಿಸಿದ ನಂತರ ವಿಧವೆಯಾದಲ್ಲಿ ಪರಿಗಣಿಸುವುದಿಲ್ಲ. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ (ವಿಧವೆಗೆ) ಮೊದಲ ಆದ್ಯತೆ ನೀಡಲಾಗುವುದು. ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರ ಮೇಲೆ ತಿಳಿಸಿದಂತೆ ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ಬೇರೆ ವರ್ಗಗಳ ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಪರಿಗಣಿಸಲಾಗುವುದಿಲ್ಲ.

ಅಂಗವಿಕಲರ ಆಯ್ಕೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅಂಗವಿಕಲರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ
ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ಅಂಗವಿಕಲರನ್ನೇ ಆಯ್ಕೆ ಮಾಡಲಾಗುತ್ತದೆ ಆದರೆ ಅಂಗವಿಕಲ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣ, ಸ್ಥಳೀಯರು ಮತ್ತು ೪೫ ವಯೋಮಿತಿಯೊಳಗೆ ಇರಬೇಕಾಗಿರುವುದು ಕಡ್ಡಾಯ.
(ಕಿವುಡರು, ಮೂಕರು, ಕುರುಡರು,ಬುದ್ದಿ ಮಾಂದ್ಯರು, ಮಾನಸಿಕ ಅಸ್ವಸ್ಥರು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಹರಲ್ಲ)

ಒಂದು ಹುದ್ದೆಗೆ ಇಬ್ಬರು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅಂಗನವಾಡಿ ಸಹಾಯಕಿಯ ಹುದ್ದೆಯಲ್ಲಿ ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ಬೇಯಿಸಿ /ಸಿದ್ಧಪಡಿಸಿ ಉಣಬಡಿಸುವುದು, ಕೇಂದ್ರವನ್ನು ಸ್ವಚ್ಚಗೊಳಿಸುವುದು, ಮಕ್ಕಳನ್ನು ಅವರ ಮನೆಗಳಿಂದ ಕೇಂದ್ರಕ್ಕೆ ಕರೆತರುವುದು ಹಾಗೂ ಕಾರ್ಯಕರ್ತೆಯು ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿಗೆ ಹೋದಾಗ ಅಂಗನವಾಡಿ ಕೇಂದ್ರದ ಜವಬ್ದಾರಿಯನ್ನು ನಿರ್ವಹಿಸಬೇಕು. ಆದ್ದರಿಂದ ಸಹಾಯಕಿಯ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ , ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಆದ್ಯತೆಯ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡಲಾಗುವುದು. ಆದರೆ ಸ್ಥಳೀಯರು, ನಿಗದಿತ ವಿದ್ಯಾರ್ಹತೆ ಮತ್ತು ವಯೋಮಿತಿಯೋಳಗೆ ಇರಬೇಕಾಗಿರುವುದು ಕಡ್ಡಾಯ.

ಕೊಡಗು ಜಿಲ್ಲೆಯ ಖಾಲಿ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಮಾನದಂಡವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Kodagu District Women Child Development recruitment notification has been released on website for the recruitment of Anganwadi Workers and Anganwadi Helpers posts. Interested candidates can apply through online before 31st march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X