
ಕೊಡಗು ಜಿಲ್ಲಾ ಪಂಚಾಯತ್ ಕಾರ್ಯಾಲಯ, ಮಡಿಕೇರಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 13 ಜಿಲ್ಲಾ ಐ.ಇ.ಸಿ ಸಂಯೋಜಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕರು ಮತ್ತು ಬೇರ್ ಫುಟ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಜಿಲ್ಲಾ ಐ.ಇ.ಸಿ ಸಂಯೋಜಕರು, ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಸಮೂಹ ಸಂವಹನ ಮಾಧ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ವಿದ್ಯಾರ್ಹತೆ, ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಬಿ.ಎಸ್ಸಿ/ಎಂ.ಎಸ್ಸಿ ವಿದ್ಯಾರ್ಹತೆ ಮತ್ತು ಬೇರ್ ಫುಟ್ ಟೆಕ್ನಿಷಿಯನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣ ಜೊತೆಗೆ ನರೇಗಾ ಯೋಜನೆಯಡಿ ಹಿಂದಿನ ವರ್ಷಗಳಲ್ಲಿ ಕನಿಷ್ಟ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರರಾಗಿ ಕೆಲಸವನ್ನು ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವೇತನ:
ಜಿಲ್ಲಾ ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ, ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ, ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ಮತ್ತು ಬೇರ್ ಫುಟ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ಇಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಏಪ್ರಿಲ್ 6,2021ರೊಳಗೆ ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











