KOF Chitradurga Recruitment 2021: 6 ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಆಫೀಸರ್ ಮತ್ತು ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ದಲ್ಲಿ 6 ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಸೀಡ್ಸ್ ಆಫೀಸರ್ ಮತ್ತು ಕೆಮಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಕೃಷಿ ಪದವಿ, ಕೆಮಿಸ್ಟ್ರಿಯಲ್ಲಿ ಬಿ.ಎಸ್ಸಿ ಪದವಿ, ಬಿಬಿಎಂ/ಬಿಬಿಎ, ಬಿ.ಕಾಂ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1,000/- ಮತ್ತು ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kofchitradurga.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 8,2021ರ ಸಂಜೆ 5:30ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ವ್ಯವಸ್ಥಾಪ ನಿರ್ದೇಶಕರು,
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ,
ಸಂಘಗಳ ಒಕ್ಕೂಟ ನಿಯಮಿತ
ಫ್ಲಾಟ್ ಸಂಖ್ಯೆ: 74/ಎ,
ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ,
ಚಿತ್ರದುರ್ಗ-577501.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KOF chitradurga recruitment 2021 notification has been released for 6 assistant executive, officer and chemist posts. Interested candidates can apply before March 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+