KOF Hubli Recruitment 2021: 15 ಸಾಮಾನ್ಯ ಕೆಲಸಗಾರ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿ., ಹುಬ್ಬಳ್ಳಿ ಇಲ್ಲಿ ಖಾಲಿ ಇರುವ 15 ಸಾಮಾನ್ಯ ಕೆಲಸಗಾರ, ಚಾಲಕ, ಸಹಾಯಕ ಮಾರಾಟಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಆಡಳಿತಾಧಿಕಾರಿ ಮತ್ತು ಕ್ಷೇತ್ರಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ, ಹುಬ್ಬಳ್ಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಸಾಮಾನ್ಯ ಕೆಲಸಗಾರ - 4 ಹುದ್ದೆಗಳು
ಚಾಲಕ - 1 ಹುದ್ದೆ
ಸಹಾಯಕ ಮಾರಾಟಾಧಿಕಾರಿ - 4 ಹುದ್ದೆಗಳು
ಸಹಾಯಕ ಲೆಕ್ಕಾಧಿಕಾರಿ - 3 ಹುದ್ದೆಗಳು
ಸಹಾಯಕ ಆಡಳಿತಾಧಿಕಾರಿ - 1 ಹುದ್ದೆ
ಕ್ಷೇತ್ರಾಧಿಕಾರಿ - 2 ಹುದ್ದೆಗಳು
ಒಟ್ಟು 15 ಹುದ್ದೆಗಳು

ವಿದ್ಯಾರ್ಹತೆ:

ಎಸ್‌.ಎಸ್‌.ಎಲ್‌.ಸಿ, ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿ, ಎಂ.ಬಿ.ಎ, ಮಾರುಕಟ್ಟೆ ಪದವಿ, ಕೃಷಿ ಪದವಿ, ಕಾನೂನು ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಲಘು ಮತ್ತು ಭಾರಿ ವಾಹನ ಚಾಲನೆ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ವರ್ಗದ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸಾಮಾನ್ಯ ಕೆಲಸಗಾರ, ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂ, ಸಹಾಯಕ ಮಾರಾಟಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಕ್ಷೇತ್ರಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪ.ಜಾ, ಪ.ಪಂ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 500/-ರೂ ಮತ್ತು ಇತರೆ ವರ್ಗದ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಡಿ/ಪೇ ಆರ್ಡರ್ ಅನ್ನು ಹುಬ್ಬಳ್ಳಿಯಲ್ಲಿ ಸಂದಾಯವಾಗುವಂತೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kofhubli.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 8,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು,
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ,
ಸಂಘಗಳ ಒಕ್ಕೂಟ ನಿಯಮಿತ,
ಹುಬ್ಬಳ್ಳಿ ರಸ್ತೆ, ತಾಜನಗರ,
ಹುಬ್ಬಳ್ಳಿ-580 031.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KOF hubli recruitment 2021 notification has been released for 15 worker, driver and officer posts. Interested candidates can apply before May 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+