KOF Recruitment 2021: 5 ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತವು 5 ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಕೃಷಿ/ಕೃಷಿ ಮಾರುಕಟ್ಟೆ/ಎಣ್ಣೆ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಭಾರತೀಯ ವ್ಯವಸ್ಥಾಪನಾ ಸಂಸ್ಥೆಯಿಂದ ಅಥವಾ ಗುಜರಾತಿನ ಆನಂದನಲ್ಲಿರುವ ಗ್ರಾಮೀಣ ವ್ಯವಸ್ಥಾಪನಾ ಸಂಸ್ಥೆಯಿಂದ ಆರ್ಥಿಕ/ಮಾರಾಟ ವಿಷಯದಲ್ಲಿ ವ್ಯವಹಾರ ಆಡಳಿತದ ಸ್ನಾತಕೋತ್ತರ ಎಂ.ಬಿ.ಎ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಕೃಷಿ ಪದವಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪಡೆದ ಪದವಿ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ (ಗುಣ ನಿಯಂತ್ರಣ) ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ ಪದವಿ-ಕೆಮಿಸ್ಟ್ರಿಯನ್ನು ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 40 ರಿಂದ ಗರಿಷ್ಟ 52 ವರ್ಷ, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಕನಿಷ್ಟ 18 ರಿದ ಗರಿಷ್ಟ 40 ವರ್ಷ, ಪ.ಜಾ, ಪ.ಪಂ ಹಾಗೂ ಪ್ರವರ್ಗ-1ರ ಗರಿಷ್ಟ 40 ವರ್ಷ, ಹಿಂದುಳಿದ ಜಾತಿ/ಸಮುದಾಯ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,04,600/- ರಿಂದ 1,50,600/-ರೂಗಳ ವರೆಗೆ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆ, ಕೆಲಸದ ಅನುಭವ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ, ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1,000/-ರೂ ಮತ್ತು ಪ.ಜಾ, ಪ.ಪಂ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೆ.ಓ.ಎಫ್ ಅಧಿಕೃತ ವೆಬ್‌ಸೈಟ್ http://www.kof.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಏಪ್ರಿಲ್ 8,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ತದನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು,
ಕೆ.ಸಿ.ಓ.ಜಿ.ಎಫ್,
ಲಿ. ನಂ.11,
೪ನೇ ಮಹಡಿ,
ಬ್ಲ್ಯೂ ಕ್ರಾಸ್ ಛೇಂಬರ್ಸ್,
ಇನ್‌ಫೆಂಟ್ರಿ ಅಡ್ಡರಸ್ತೆ,
ಬೆಂಗಳೂರು-01.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KOF recruitment 2021 notification has been released for 5 assistant executive and manager posts. Interested candidates can apply before April 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+