ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 55 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ವ್ಯವಸ್ಥಾಪಕರು, ಲೆಕ್ಕಿಗರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಶೀಘ್ರ ಲಿಪಿಗಾರರು, ವಾಹನ ಚಾಲಕರು, ಜವಾನರು ಸೇರಿದಂತೆ 55 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಗಳನ್ನು ಖದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿರುವುದಿಲ್ಲ.
ಅರ್ಜಿ ಶುಲ್ಕ
ಹುದ್ದೆ 1 ರಿಂದ 5 ರವರೆಗೆ
- ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.1000/-
- ಪ.ಜಾ/ಪ.ಪಂ/ಅಂಗವಿಕಲ/ಮಾ.ಸೈ/ವಿಧವೆ ಅಭ್ಯರ್ಥಿಗಳಿಗೆ ರೂ.750/-
ಹುದ್ದೆ 6 ರಿಂದ 7 ರವರೆಗೆ
- ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.800/-
- ಪ.ಜಾ/ಪ.ಪಂ/ಅಂಗವಿಕಲ/ಮಾ.ಸೈ/ವಿಧವೆ ಅಭ್ಯರ್ಥಿಗಳಿಗೆ ರೂ.600/-
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 10-01-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-01-2018
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-01-2018
ಸಹಾಯವಾಣಿ: 8951107408
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











