ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ 10 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಒಮ್ಮೆ ಪರಿಶೀಲಿಸಿಕೊಂಡು ನಂತರ ಅರ್ಜಿಗಳನ್ನು ಆನ್ ಲೈನ್ ನಲ್ಲಿ ದಿನಾಂಕ 20.2.2019ರ ರಾತ್ರಿ 11:59 ರೊಳಗೆ ಮಾತ್ರ ಸಲ್ಲಿಸಬಹುದು.

| CRITERIA | DETAILS |
| Name Of The Posts | ಜವಾನರು |
| Organisation | ಜಿಲ್ಲಾ ನ್ಯಾಯಾಲಯ |
| Educational Qualification | 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಕೋಲಾರ |
| Salary Scale | ಜವಾನ-ತಿಂಗಳಿಗೆ 17,000/- ರಿಂದ28,950/- ರೂ |
| Application Start Date | January 21, 2019 |
| Application End Date | February 20, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಅಥವಾ ತತ್ಸಮಾ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹುದ್ದೆಗಳ ವರ್ಗೀಕರಣ:
ಜವಾನ: 10 ಹುದ್ದೆಗಳು
| ಮೀಸಲಾತಿ | ಮಹಿಳೆ | ಗ್ರಾಮೀಣ | ಮಾ.ಸೈ | ಅಂಗವಿಕಲ | ಕ.ಮಾ.ಅ | ಇತರೆ | ಒಟ್ಟು |
| ಪರಿಶಿಷ್ಟ ಜಾತಿ | 1 | 1 | 2 | ||||
| ಪ್ರವರ್ಗ-2A | 2 | 2 | |||||
| ಪ್ರವರ್ಗ-2B | 1* | 1 | |||||
| ಪ್ರವರ್ಗ-3B | 1* | 1 | |||||
| ಸಾಮಾನ್ಯ ಅಭ್ಯರ್ಥಿ | 1 | 1 | 1** | 1 | 4 | ||
| ಒಟ್ಟು | 1 | 3 | 1 | 3 | 1 | 1 | 10 |
ವಿಶೇಷ ಸೂಚನೆ:
ಮಾ.ಸೈ = ಮಾಜಿ ಸೈನಿಕ ಅಭ್ಯರ್ಥಿ
* ಈ ಹುದ್ದೆಗಳು ಅಂಧ: ದೃಷ್ಟಿಮಾಂಧ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಿದೆ.
** ಈ ಹುದ್ದೆಯು ಶ್ರವಣ ದೋಷವುಳ್ಳ ಅಭ್ಯರ್ಥಿಗಳಿಗೆ ಮೀಸಲಿರಿಸಿದೆ.
ವಯೋಮಿತಿ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ:
| ಸಾಮಾನ್ಯ ವರ್ಗ | 35ವರ್ಷ |
| 2A,2B,3A,3B ಅಭ್ಯರ್ಥಿಗಳಿಗೆ | 38ವರ್ಷ |
| ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ | 40ವರ್ಷ |
ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ವೇತನದ ವಿವರ:
ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ28,950/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಢಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:
| ಸಾಮಾನ್ಯ ಅರ್ಹತೆ, ಪ್ರವರ್ಗ- 1,ಪ್ರವರ್ಗ- 2A, 2B,3A,3B ಅಭ್ಯರ್ಥಿಗಳಿಗೆ | 200/-ರೂ |
| ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ | 100/-ರೂ |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ http://karnatakajudiciary.kar.nic.in/districtrecruitment.asp ಅಥವಾ https://districts.ecourts.gov.in/kolar-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ 21.2.2019 ಕೊನೆಯ ದಿನವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











