ಕೋಲಾರ ಜಿಲ್ಲಾ ನ್ಯಾಯಾಲಯ: 3 ಬೆರಳಚ್ಚುಗಾರ ಮತ್ತು 2 ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ 3 ಬೆರಳಚ್ಚುಗಾರ ಮತ್ತು 2 ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಒಮ್ಮೆ ಪರಿಶೀಲಿಸಿಕೊಂಡು ನಂತರ ಅರ್ಜಿಗಳನ್ನು ಆನ್ ಲೈನ್ ನಲ್ಲಿ ದಿನಾಂಕ 20.2.2019ರ ರಾತ್ರಿ 11:59 ರೊಳಗೆ ಮಾತ್ರ ಸಲ್ಲಿಸಬಹುದು.

 ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕೋಲಾರ
Salary Scale ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ,
Application Start Date January 21, 2019
Application End Date February 20, 2019

ವಿದ್ಯಾರ್ಹತೆ:

ಬೆರಳಚ್ಚು ಗಾರರು ಮತ್ತು ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳೀಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.

ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಜ್ಯೂನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.

ಬೆರಳಚ್ಚುಗಾರ: 3 ಹುದ್ದೆಗಳು

ಹುದ್ದೆಗಳ ವರ್ಗೀಕರಣ

ಮೀಸಲಾತಿಗ್ರಾಮೀಣ ಅಂಗವಿಕಲ ಅಭ್ಯರ್ಥಿ ಒಟ್ಟು
ಪ್ರವರ್ಗ -2A 1 1
ಪ್ರವರ್ಗ-2B 1*1
ಸಾಮಾನ್ಯ ಅಭ್ಯರ್ಥಿ 1 1
ಒಟ್ಟು 2 13

*ಈ ಹುದ್ದೆಯು ಅಂಧ: ದೃಷ್ಟಿಮಾಂದ್ಯ ಅಭ್ಯರ್ಥಿಳಿಗೆ ಮೀಸಲಿರಿಸಿದೆ.

ಬೆರಳಚ್ಚು ನಕಲುಗಾರ : 02ಹುದ್ದೆಗಳು

ಹುದ್ದೆಗಳ ವರ್ಗೀಕರಣ

ಮೀಸಲಾತಿಮಹಿಳೆ ಒಟ್ಟು
ಪ್ರವರ್ಗ-2B1 1
ಸಾಮಾನ್ಯ ಅಭ್ಯರ್ಥಿ1 1
ಒಟ್ಟು2 2

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯವರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನ:

ಹುದ್ದೆಗಳಿಗೆ ಆಯ್ಕೆಯಾದ ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಬೆರಳಚ್ಚುಗಾರ ಹುದ್ಚೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು15ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ಅರ್ಹತೆ, ಪ್ರವರ್ಗ- 1,ಪ್ರವರ್ಗ- 2A, 2B,3A,3B ಅಭ್ಯರ್ಥಿಗಳಿಗೆ200/-ರೂ
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ100/-ರೂ
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ http://karnatakajudiciary.kar.nic.in/districtrecruitment.asp ಅಥವಾ https://districts.ecourts.gov.in/kolar-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ 21.2.2019 ಕೊನೆಯ ದಿನವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.

ಬೆರಳಚ್ಚುಗಾರ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Kolar District Court has invited application for the post of 3 typist and 2 copy-typists.Interested candidates can apply through online before 20th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X