ಕೋಲಾರ ಜಿಲ್ಲಾ ನ್ಯಾಯಾಲಯ: 9 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಒಮ್ಮೆ ಪರಿಶೀಲಿಸಿಕೊಂಡು ನಂತರ ಅರ್ಜಿಗಳನ್ನು ಆನ್ ಲೈನ್ ನಲ್ಲಿ ದಿನಾಂಕ 20.2.2019ರ ರಾತ್ರಿ 11:59 ರೊಳಗೆ ಮಾತ್ರ ಸಲ್ಲಿಸಬಹುದು.

ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಶೀಘ್ರಲಿಪಿಗಾರರು
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕೋಲಾರ
Salary Scale ಶೀಘ್ರಲಿಪಿಗಾರ-ತಿಂಗಳಿಗೆ 27,650/- ರಿಂದ 52,650/- ರೂ
Application Start Date January 21, 2019
Application End Date February 20, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಕಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಿರಿಯ ಶ್ರೇಣಿ ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಹುದ್ದೆಗಳ ವರ್ಗೀಕರಣ:

ಶೀಘ್ರಲಿಪಿಗಾರರು: 9 ಹುದ್ದೆಗಳು

ಮೀಸಲಾತಿ ವರ್ಗಮಹಿಳೆಗ್ರಾಮೀಣಮಾ.ಸೈಪಿಡಿಪಿಇತರೆಒಟ್ಟು
ಪರಿಶಿಷ್ಟ ಪಂಗಡ1 1
ಪ್ರವರ್ಗ-11 1
2A 11
2B1 1
3A1 1
3B1 1
ಸಾಮಾನ್ಯ ಅಭ್ಯರ್ಥಿಗಳು 111 3
ಒಟ್ಟು511119

ವಿಶೇಷ ಸೂಚನೆ:
ಮಾ.ಸೈ = ಮಾಜಿ ಸೈನಿಕ ಅಭ್ಯರ್ಥಿ

ವಯೋಮಿತಿ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ:

ಸಾಮಾನ್ಯ ವರ್ಗ35ವರ್ಷ
2A,2B,3A,3B38ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-140ವರ್ಷ

ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/- ರೂ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಢಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ಅರ್ಹತೆ, ಪ್ರವರ್ಗ- 1,ಪ್ರವರ್ಗ- 2A, 2B,3A,3B ಅಭ್ಯರ್ಥಿಗಳಿಗೆ 200/-ರೂ
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 100/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ http://karnatakajudiciary.kar.nic.in/districtrecruitment.asp ಅಥವಾ https://districts.ecourts.gov.in/kolar-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ 21.2.2019 ಕೊನೆಯ ದಿನವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Kolar District Court has invited application for the post of 9 stenographers.Interested candidates can apply through online before 20th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X