Kolar Zilla Panchayat Recruitment 2021: 4 ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ಪಂಚಾಯತ್, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ 4 ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕೋಲಾರ ಜಿಲ್ಲಾ ಪಚಾಯಿತಿಯಲ್ಲಿ ಉದ್ಯೋಗಾವಕಾಶ...ಮಾ.25ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಎಸ್ಸಿ/ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಕೋಲಾರ ಜಿಲ್ಲಾ ಪಂಚಾಯತ್, ಕಛೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಖುದ್ದಾಗಿ ಮಾರ್ಚ್ 25,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಕೋಲಾರ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕೋಲಾರ ಜಿಲ್ಲಾ ಪಚಾಯಿತಿಯಲ್ಲಿ ಉದ್ಯೋಗಾವಕಾಶ...ಮಾ.25ರೊಳಗೆ ಅರ್ಜಿ ಹಾಕಿ
For Quick Alerts
ALLOW NOTIFICATIONS  
For Daily Alerts

English summary
Kolar zilla panchayat recruitment 2021 notification has been released for 3 technical assistant posts. Interested candidates can apply before March 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X