ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) 58 ಟೆಕ್ನೀಶಿಯನ್-III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ ಮೂಲಕ ನವೆಂಬರ್ 27,2020ರೊಳಗೆ ಅರ್ಜಿಯನ್ನು ಹಾಕಬಹುದು.

ವಿದ್ಯಾರ್ಹತೆ:
ಟೆಕ್ನೀಶಿಯನ್ ಹುದ್ದೆಗಳಿಗೆ ಮೆಟ್ರಿಕ್ಯೂಲೇಷನ್ (ಎಸ್‌ಎಸ್‌ಎಲ್‌ಸಿ) ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಇಲೆಕ್ಟ್ರೀಷಿಯನ್, ವೈಯರ್‌ಮ್ಯಾನ್, ಮೆಕ್ಯಾನಿಕ್ ಹೆಚ್‌ಟಿ, ಎಲ್‌ಟಿ ಎಕ್ವಿಪ್‌ಮೆಂಟ್, ಕೇಬಲ್ ಜಾಯಿಂಟಿಂಗ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಟ್ರೇಡ್‌ಗಳಲ್ಲಿ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯೋಮಿತಿಯೊಳಗಿರಬೇಕು.
ವೇತನ:
ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು 500/-ರೂ, ಎಸ್‌ಸಿ / ಎಸ್‌ಟಿ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್
http://konkanrailway.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 27,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











