Konkan Railway Recruitment 2021 : 139 ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) 2021ನೇ ಸಾಲಿಗೆ 139 ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ 139 ಟ್ರೈನಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 22,2021 ರಿಂದ ಪ್ರಾರಂಭವಾಗಿ ನವೆಂಬರ್ 22,2021ರಂದು ಕೊನೆಗೊಳ್ಳಲಿದೆ.

KRCL ನೇಮಕಾತಿ 2021 ಅರ್ಹತೆ :

KRCL ನೇಮಕಾತಿ 2021 ಅರ್ಹತೆ :

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ಕೆಆರ್‌ಸಿಎಲ್ ನೇಮಕಾತಿ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.

KRCL ನೇಮಕಾತಿ 2021 ವಯೋಮಿತಿ :

KRCL ನೇಮಕಾತಿ 2021 ವಯೋಮಿತಿ :

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KRCL ನೇಮಕಾತಿ 2021 ವೇತನ :

KRCL ನೇಮಕಾತಿ 2021 ವೇತನ :

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ 3,542/- ರಿಂದ 4,984/-ರೂಗಳ ವರೆಗೆ ಸ್ಟೈಫೆಂಡ್ ಅನ್ನು ನೀಡಲಾಗುವುದು.

KRCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

KRCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ, ಗುಂಪು ಚರ್ಚೆ, ದೈಹಿಕ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

KRCL ನೇಮಕಾತಿ 2021 ಅರ್ಜಿ ಶುಲ್ಕ :

KRCL ನೇಮಕಾತಿ 2021 ಅರ್ಜಿ ಶುಲ್ಕ :

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

KRCL ನೇಮಕಾತಿ 2021ಅರ್ಜಿ ಸಲ್ಲಿಕೆ :

KRCL ನೇಮಕಾತಿ 2021ಅರ್ಜಿ ಸಲ್ಲಿಕೆ :

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://konkanrailway.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 22,2021 ರಿಂದ ನವೆಂಬರ್ 22,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಟ್ರೈನಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Konkan railway recruitment 2021 notification has been released for 139 trainee apprentice posts. Interested candidates can apply through online before November 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+