ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿ

ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 07 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಾಸನದಲ್ಲಿ ಜನವರಿ 23 ರಂದು ಉದ್ಯೋಗ ಮೇಳಹಾಸನದಲ್ಲಿ ಜನವರಿ 23 ರಂದು ಉದ್ಯೋಗ ಮೇಳ

ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 07 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಬೆಂಗಳೂರಿನ ಬಿಇಎಲ್ ನಲ್ಲಿ 26 ಹುದ್ದೆಗಳ ನೇಮಕಾತಿಬೆಂಗಳೂರಿನ ಬಿಇಎಲ್ ನಲ್ಲಿ 26 ಹುದ್ದೆಗಳ ನೇಮಕಾತಿ

ಬೆರಳಚ್ಚುಗಾರರ ನೇಮಕಾತಿ

ಹುದ್ದೆಗಳ ವಿವರ

ಬೆರಳಚ್ಚುಗಾರರು: 03 ಹುದ್ದೆಗಳು
ವೇತನ ಶ್ರೇಣಿ: ರೂ.11600-21000 ಹಾಗೂ ಇತರ ಭತ್ಯೆಗಳೊಂದಿಗೆ

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಅರ್ಹತಾ ಪರೀಕ್ಷೆ

ಅಭ್ಯರ್ಥಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗು ಇಂಗ್ಲಿಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಆಯ್ಕೆ ವಿಧಾನ

ಅಭ್ಯರ್ಥಿಯು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಯ್ಕೆ ಮಾಡಲಾಗುವುದು.

ವಯೋಮಿತಿ

ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,

ಗರಿಷ್ಠ ವಯೋಮಿತಿ

  • ಸಾಮಾನ್ಯ ವರ್ಗ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
  • ಪ.ಜಾ, ಪ.ಪಂ, ಪ್ರ-1 : 40 ವರ್ಷ

ಪರಿವೀಕ್ಷಣಾ ಅವಧಿ

ಆಯ್ಕೆಯಾದ ಅಭ್ಯಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗದ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಪ.ಜಾ/ಪ.ಪಂ/ಪ್ರ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Recruitment Notification of Koppal District Court for post of Typist. Interested candidates can apply before Feb 07, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X