ಕೊಪ್ಪಳ ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 6 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಜುಲೈ 31,2019ರ ರಾತ್ರಿ 11:59 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಶೀಘ್ರಲಿಪಿಗಾರ |
| Organisation | ಜಿಲ್ಲಾ ನ್ಯಾಯಾಲಯ |
| Educational Qualification | ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಕೊಪ್ಪಳ |
| Salary Scale | ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ |
| Application Start Date | July 2, 2019 |
| Application End Date | July 31, 2019 |
ವಿದ್ಯಾರ್ಹತೆ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್‌ನಲ್ಲಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮಾಡುವ ಜ್ಞಾನವು ಅವಶ್ಯವಾಗಿರುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ ವಯೋಮಿತಿಯ ವಿವರ : ಸಾಮಾನ್ಯ ವರ್ಗ ಗರಿಷ್ಠ 35 ವರ್ಷ, ಪ್ರವರ್ಗ-2A,2B,3A ಮತ್ತು 3B ಯ ಗರಿಷ್ಠ 38 ವರ್ಷ ಮತ್ತು ಎಸ್ ಸಿ/ಎಸ್ ಟಿ ಪ್ರವರ್ಗ-1ರ ಗರಿಷ್ಠ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ, ಪ.ಜಾ / ಪ.ಪಂ / ಪ್ರ-1,2ಎ,2ಬಿ,3ಎ,3ಬಿ, ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ವೇತನದ ವಿವರ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.
ಆಯ್ಕೆಯ ವಿಧಾನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಲಾಗುವುದು ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.
ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಒಂದು ನಿಮಿಷಕ್ಕೆ 260 ಅಕ್ಷರಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಲಾಗುವುದು ಅದನ್ನು ಬೆರಳಚ್ಚು ಯಂತ್ರ/ಕಂಪ್ಯೂಟರ್ ಮೇಲೆ 45 ನಿಮಿಷದಲ್ಲಿ ಲಿಪ್ಯಂತರ ಮಾಡಬೇಕು.
ಅರ್ಹತಾ ಪರೀಕ್ಷೆಯು ಗರಿಷ್ಟ 100 ಅಂಕಗಳನ್ನು ಒಳಗೊಂಡಿದ್ದು ಅದರಲ್ಲಿ ತೇರ್ಗಡೆಯಾಗಲು ಕನಿಷ್ಟ 50 ಅಂಕಗಳು ಪಡೆಯಬೇಕು ಮತ್ತು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ನಿಗದಿತ ಅರ್ಜಿ ಶುಲ್ಕ ಹಾಗೂ ಪಾವತಿಸುವ ವಿಧಾನ:
| ಸಾಮಾನ್ಯ ವರ್ಗ, ಪ್ರವರ್ಗ-2ಎ,2ಬಿ,3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ | 200/-ರೂ |
| ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ-1 ಹಾಗೂ ಅಂಗವಿಕಲ ಆಭ್ಯರ್ಥಿಗಳಿಗೆ | ಶುಲ್ಕ ವಿನಾಯಿತಿ ಇರುತ್ತದೆ |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/koppal-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card ಸೌಲಭ್ಯದ ಮೂಲಕ ಅಥವಾ ಚಲನ್ ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್‌ನ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದು. ಚಲನ್ ಪ್ರತಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಿಂದ ಪ್ರಿಂಟ್ ಮಾಡಿಕೊಳ್ಳತಕ್ಕದ್ದು. ಅಭ್ಯರ್ಥಿಗಳು ಶುಲ್ಕವನ್ನು ಚಲನ್ ಮುಖಾಂತತ ಪಾವತಿಸಲು ಆಗಸ್ಟ್ 2,2019 ಕಡೆಯ ದಿನವಾಗಿರುತ್ತದೆ ಅದರೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ


Click it and Unblock the Notifications











