Koppal District Court Recruitment 2022 : 6 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಮತ್ತು ಸತ್ಯ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 5 ಶೀಘ್ರಲಿಪಿಗಾರ ಮತ್ತು 1 ಬೆರಳಚ್ಚುಗಾರ ಸೇರಿದಂತೆ ಒಟ್ಟು 6 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 1,2022 ರಿಂದ ಏಪ್ರಿಲ್ 21,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕೊಪ್ಪಳ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಏ.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕೊಪ್ಪಳ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಏ.21ರೊಳಗೆ ಅರ್ಜಿ ಹಾಕಿ

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ
ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಕೊಪ್ಪಳ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಏ.21ರೊಳಗೆ ಅರ್ಜಿ ಹಾಕಿ

ಆಯ್ಕೆಯ ವಿಧಾನ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಒಂದು ನಿಮಿಷಕ್ಕೆ 260 ಅಕ್ಷರಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಲಾಗುವುದು ಅದನ್ನು ಬೆರಳಚ್ಚು ಯಂತ್ರ/ಕಂಪ್ಯೂಟರ್ ಮೇಲೆ 45 ನಿಮಿಷದಲ್ಲಿ ಲಿಪ್ಯಂತರ ಮಾಡಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 10 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಕೊಪ್ಪಳ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಏ.21ರೊಳಗೆ ಅರ್ಜಿ ಹಾಕಿ

ನಿಗದಿತ ಅರ್ಜಿ ಶುಲ್ಕ :

ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/koppal ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಏಪ್ರಿಲ್ 22,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಕೊಪ್ಪಳ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಏ.21ರೊಳಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/koppal ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 1,2022 ರಿಂದ ಏಪ್ರಿಲ್ 21,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
District court of koppal recruitment 2022 notification has been released for 6 stenographer and typist posts. Interested candidates can apply before April 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X