ಕರ್ನಾಟಕ ವಿದ್ಯುತ್ ಸರಬರಾಜು ನಿಗಮದಲ್ಲಿ 348 ಹುದ್ದೆಗಳ ನೇಮಕಾತಿ

ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ಸೇರಿದಂತೆ ಇನ್ನು ಹಲವು ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತವು 348 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‍ಟಿಪಿಎಸ್), ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಬಿಟಿಪಿಎಸ್) ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಗಳಲ್ಲಿನ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ಸೇರಿದಂತೆ ಇನ್ನು ಹಲವು ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯುತ್ ಸರಬರಾಜು ನಿಗಮದಲ್ಲಿ ನೇಮಕಾತಿ

348 ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟೆಂಟ್ ಇಂಜಿನಿಯರ್

  • ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್)-14 ಹುದ್ದೆಗಳು
  • ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್)-61 ಹುದ್ದೆಗಳು
  • ಅಸಿಸ್ಟೆಂಟ್ ಇಂಜಿನಿಯರ್ (ಮೆಕಾನಿಕಲ್)-05 ಹುದ್ದೆಗಳು
  • ಅಸಿಸ್ಟೆಂಟ್ ಇಂಜಿನಿಯರ್ (ಇನ್ಸ್ಟ್ರುಮೆಂಟೇಷನ್)-60 ಹುದ್ದೆಗಳು

ವಿದ್ಯಾರ್ಹತೆ ಆಯಾ ವಿಭಾಗಗಳಿಗೆ ಸಂಬಂಧ ಪಟ್ಟ ವಿಷಯಗಳಲ್ಲಿ ಬಿ.ಇ ಪದವಿ ಪಡೆದಿರುವ ಮತ್ತು ಎಎಂಐಇ (ಭಾರತ) ನಡೆಸುವ ಎಲೆಕ್ಟ್ರಿಕ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿರುವ ಅಭ್ಯರ್ಥಿಗಳು ಅಸಿಸ್ಟೆಂಟ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ವೇತನ ಶ್ರೇಣಿ: ರೂ.19055-43995/-

ಜ್ಯೂನಿಯರ್ ಇಂಜಿನಿಯರ್

  • ಜ್ಯೂನಿಯರ್ ಇಂಜಿನಿಯರ್ (ಸಿವಿಲ್)-12 ಹುದ್ದೆಗಳು
  • ಜ್ಯೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)-97 ಹುದ್ದೆಗಳು
  • ಜ್ಯೂನಿಯರ್ಇಂಜಿನಿಯರ್ (ಮೆಕಾನಿಕಲ್)-56 ಹುದ್ದೆಗಳು

ವಿದ್ಯಾರ್ಹತೆ ಸಂಬಂಧಿಸಿದ ಕ್ಷೇತ್ರದಲ್ಲಿ ಡಿಪ್ಲೊಮಾ/ಇಂಜಿನಿಯರಿಂಗ್ ಪೂರ್ಣಗೊಳಿಸಿರುವ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ: ರೂ.14395-40785/-

ಕೆಮಿಸ್ಟ್-07 ಹುದ್ದೆಗಳು
ವೇತನ ಶ್ರೇಣಿ: ರೂ.16355-41855/-

ಕೆಮಿಕಲ್ ಸೂಪರ್ ವೈಸರ್-36 ಹುದ್ದೆಗಳು
ವೇತನ ಶ್ರೇಣಿ: ರೂ.14395-40785/-

ವಿದ್ಯಾರ್ಹತೆ
ಬಿ.ಎಸ್ಸಿ ಪದವೀಧರರು ಕೆಮಿಸ್ಟ್ ಮತ್ತು ಸೂಪರ್ ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ

ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 35 ವರ್ಷ (ಎಸ್.ಸಿ/ಎಸ್.ಟಿ/ಪ್ರ-1ರ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ)

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ನಿಗಮದ ವೆಬ್‍ಸೈಟ್ www.karnatakapower.com ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿಯೇ
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಇತರೆ ಯಾವುದೇ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಶುಲ್ಕ (ಮರುಪಾವತಿಸದ)

  • ರೂ.500/- (ಎಸ್‍ಸಿ/ಎಸ್‍ಟಿ/ಪ್ರವರ್ಗ-I ಅಭ್ಯರ್ಥಿಗಳಿಗೆ ರೂ.250/- +ಅಂಚೆ ಸೇವಾ ಶುಲ್ಕ ರೂ.15/-)
  • ಮಾಜಿ ಸೈನಿಕ ಅಭ್ಯರ್ಥಿ/ವಿಕಲಚೇತನ/ಯೋಧರ ಮಕ್ಕಳು ಇವರಿಗೆ ಅತ್ಯಲ್ಪ ಶುಲ್ಕ ((Nominal Fee) ರೂ.50/- (ರೂ.35/- ಪ್ರಕ್ರಿಯೆಯ ಶುಲ್ಕ+ ಅಂಚೆ ಸೇವಾ ಶುಲ್ಕ ರೂ.15/-)

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-08-2017
ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22-08-2017

ಪರೀಕ್ಷಾ ಕೇಂದ್ರಗಳು

ಬೆಂಗಳೂರು, ಬಳ್ಳಾರಿ, ಬೆಳಗಾಂ, ಕಲಬುರ್ಗಿ, ಮೈಸೂರು, ಶಿವಮೊಗ್ಗ

ಹೆಚ್ಚಿನ ಮಾಹಿತಿಗಾಗಿ ಗಮನಿಸಿ karnatakapower.com

For Quick Alerts
ALLOW NOTIFICATIONS  
For Daily Alerts

English summary
Karnataka Power Corporation Limited invites online applications to recruit assistant engineers, junior engineers, chemist and chemical supervisor. Eligible candidates can apply on before August 08.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X