ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ 14 ಜ್ಯೂನಿಯರ್ ಪರ್ಸನಲ್ ಆಫೀಸರ್ (ಹೈದರಾಬಾದ್ ಕರ್ನಾಟಕ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.
ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 20,2019 ರಿಂದ ಏಪ್ರಿಲ್ 22,2019 ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಜ್ಯೂನಿಯರ್ ಪರ್ಸನಲ್ ಆಫೀಸರ್ |
Organisation | ಕರ್ನಾಟಕ ವಿದ್ಯುತ್ ನಿಗಮ ನಿಯಮಿತ |
Educational Qualification | ಯಾವುದೇ ಪದವಿ ,ಪಿಜಿ ಡಿಪ್ಲೋಮಾ |
Job Location | ಕರ್ನಾಟಕ |
Salary Scale | 14,395/- ರಿಂದ 40,785/-ರೂ |
Application Start Date | March 20, 2019 |
Application End Date | April 22, 2019 |
ವಿದ್ಯಾರ್ಹತೆ:
ಜ್ಯೂನಿಯರ್ ಪರ್ಸನಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್ಮೆಂಟ್ ನಲ್ಲಿ ಸ್ನಾತಕೋತ್ತರ ಪದವಿ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿದಾರರು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು.
ಗರಿಷ್ಟ ವಯೋಮಿತಿ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-1 | 40 ವರ್ಷಗಳು |
ಇತರೆ ಹಿಂದುಳಿದ ವರ್ಗಗಳು | 38 ವರ್ಷಗಳು |
ಜನರಲ್ ಮೆರಿಟ್ | 35 ವರ್ಷಗಳು |
ಮಾಜಿ ಸೈನಿಕ | 45 ವರ್ಷಗಳು |
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,395/- ರಿಂದ 40,785/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾಭ್ಯಾಸದ ಅಂಕಗಳ ಆಧಾರದ ಮೇಲೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 500/- ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳು 250/-ರೂ ಶುಲ್ಕ ಮತ್ತು ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳು ನಾಮಿನಲ್ ಶುಲ್ಕ 50/-ರೂ ಅನ್ನು ಪಾವತಿಸಬೇಕಿರುತ್ತದೆ. ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ನಲ್ಲಿ ಏಪ್ರಿಲ್ 26,2019 ರ ಮಧ್ಯಾಹ್ನ 3 ಗಂಟೆಯೊಳಗೆ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ನಲ್ಲಿಅಧಿಕೃತ ವೆಬ್ಸೈಟ್ http://karnatakapower.com/ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಹೊರತುಪಡಿಸಿ ಮತ್ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ