ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ 6 ಕಲ್ಯಾಣ ಅಧಿಕಾರಿ ಮತ್ತು ಪರಿಸರ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಜುಲೈ 2,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಕಲ್ಯಾಣ ಅಧಿಕಾರಿ ಮತ್ತು ಪರಿಸರ ಅಧಿಕಾರಿ |
| Organisation | ಕರ್ನಾಟಕ ವಿದ್ಯುತ್ ನಿಗಮ ನಿಯಮಿತ |
| Educational Qualification | ಯಾವುದೇ ಪದವಿ , ಸ್ನಾತಕೋತ್ತರ ಪದವಿ (ಸಮಾಜ ಕಾರ್ಯ) , ಬಿ.ಇ / ಬಿ.ಟೆಕ್ |
| Job Location | ಕರ್ನಾಟಕ |
| Salary Scale | ತಿಂಗಳಿಗೆ 50,000/- ರೂ |
| Application Start Date | June 13, 2019 |
| Application End Date | July 2, 2019 |
ವಿದ್ಯಾರ್ಹತೆ:
ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ಪರಿಸರ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಯೋಮಿತಿ ಇರುವುದಿಲ್ಲ
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾಭ್ಯಾಸದ ಅಂಕಗಳ ಆಧಾರದ ಮೇಲೆ ಮತ್ತು ಅಭ್ಯರ್ಥಿಗಳ ವೃತ್ತಿ ಬದುಕಿನ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 500/- ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕ ಅನ್ನು ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೆಪಿಸಿಎಲ್‌ನ ಅಧಿಕೃತ ವೆಬ್‌ಸೈಟ್ http://karnatakapower.com/en/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜುಲೈ 2,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಗಳ ಹೆಸರನ್ನು ನಮೂದಿಸತಕ್ಕದ್ದು. ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
ಕಚೇರಿಯ ವಿಳಾಸ:
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ,
ನಂ 82,
ಶಕ್ತಿ ಭವನ,
ರೇಸ್ ಕೋರ್ಸ್ ರೋಡ್,
ಬೆಂಗಳೂರು-560001,
ಕರ್ನಾಟಕ


Click it and Unblock the Notifications











