ಕೆಪಿಎಸ್‌ಸಿ: ಅಬಕಾರಿ ಇಲಾಖೆಯಲ್ಲಿ ಉದ್ಯೋಗಾವಕಾಶ

1180 ಖಾಲಿಯಿರುವ ಹುದ್ದೆಗೆಳನ್ನು ಭರ್ತಿಮಾಡಿಕೊಳ್ಳಲು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರಾಜ್ಯದ ಅಬಕಾರಿ ಇಲಾಖೆಯಲ್ಲಿ ಅಗತ್ಯವಿರುವ ಅಬಕಾರಿ ಉಪನಿರೀಕ್ಷಕ ಮತ್ತು ಅಬಕಾರಿ ರಕ್ಷಕ (ಪುರುಷ ಮತ್ತು ಮಹಿಳೆ) ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಅರ್ಜಿ ಆಹ್ವಾನಿಸಿದೆ.
1180 ಖಾಲಿಯಿರುವ ಹುದ್ದೆಗೆಳನ್ನು ಭರ್ತಿಮಾಡಿಕೊಳ್ಳಲು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೂ ಮುನ್ನ ಆಧಾರ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ.

ಹುದ್ದೆಗಳ ವಿವರ

ಅಬಕಾರಿ ಉಪನಿರೀಕ್ಷಕರು- 177
ಅಬಕಾರಿ ರಕ್ಷಕರು(ಪುರುಷ)- 952
ಅಬಕಾರಿ ರಕ್ಷಕರು(ಮಹಿಳೆ)- 51

ವೇತನ

ಅಬಕಾರಿ ಉಪನಿರೀಕ್ಷಕರು: ₹16,000-29,600
ಅಬಕಾರಿ ರಕ್ಷಕರು: ₹11,600-21,000

ಅರ್ಜಿ ಸಲ್ಲಿಸುವ ವಿಧಾನ

  • ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬೇಕು. 
  • ಅರ್ಜಿ ಭರ್ತಿ ನಂತರ ಚಲನ್‌ ಡೌನ್‌ಲೋಡ್‌ ಮಾಡಿ ಯಾವುದೇ ಇ-ಪಾವತಿ ಅಂಚೆ ಕಚೇರಿಯಲ್ಲಿ ಪರೀಕ್ಷಾ ಶುಲ್ಕ ಪಾವತಿಸಬೇಕು

  • ಆನ್-ಲೈನ್ ವಿಳಾಸ http://kpsc.kar.nic.in/index.html

ಕೆಪಿಎಸ್‌ಸಿ ಅಬಕಾರಿ ಇಲಾಖೆಯಲ್ಲಿ 1180 ಹುದ್ದೆ

ಸೂಚನೆ

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
  • ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ "ONLINE" ಮೂಲಕ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಅವರುಗಳ ಆಧಾರ್ ಕಾರ್ಡ್ ಸಂಖ್ಯೆಯನ್ನು ತಪ್ಪದೇ ಅರ್ಜಿಯಲ್ಲಿ ಭರ್ತಿ ಮಾಡತಕ್ಕದ್ದು. ಆಧಾರ್ ಕಾರ್ಡ್ ಮಾಡಿಸದೆ ಇರುವ ಅಭ್ಯರ್ಥಿಗಳು ಈ ಅಧಿಸೂಚನೆ ಹೊರಡಿಸಿದ ತಕ್ಷಣ ಆಧಾರ್ ಕಾರ್ಡ್ ಮಾಡಿಸಿ ಅರ್ಜಿಯಲ್ಲಿ ತಪ್ಪದೇ ನಮೂದಿಸತಕ್ಕದ್ದು.
  • ಅರ್ಜಿಗಳನ್ನು ONLINE ಮೂಲಕ ಭರ್ತಿ ಮಾಡಿ ಪರೀಕ್ಷಾ ಶುಲ್ಕವನ್ನು ಅಂಚೆ ಕಛೇರಿಯ ಕೆಲಸದ ವೇಳೆಗೆ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಿದ್ದು, ಈ ಸೌಲಭ್ಯದ ಜೊತೆಗೆ ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕವು ಸಹ ಸಂದಾಯ ಮಾಡಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಕೆಗೆ ದಿನಾಂಕ

  • ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 28-02-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2017 ರ ರಾತ್ರಿ 11:45 ಗಂಟೆ

ಪರೀಕ್ಷಾ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳು ₹300
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ₹150 ಶುಲ್ಕ ಪಾವತಿಸಬೇಕು.
  • ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯಿದೆ.
  • ಪರೀಕ್ಷಾ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31-03-2017

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು. ಅಬಕಾರಿ ರಕ್ಷಕರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪೂರೈಸಿರಬೇಕು.

ವಯೋಮಿತಿ

ಕನಿಷ್ಠ 18 ಹಾಗೂ ಗರಿಷ್ಠ 26 ವರ್ಷ.

ವಯೋಮಿತಿಯಲ್ಲಿ ಸಡಿಲಿಕೆ

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯಿದೆ. ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ ಕನಿಷ್ಠ 21 ವರ್ಷ.

ದೇಹದಾರ್ಢ್ಯತೆ:

  • ಎತ್ತರ: ಕನಿಷ್ಠ 163 ಸೆಂ.ಮೀ.(ಮಹಿಳೆ: ಕನಿಷ್ಠ 157 ಸೆಂ.ಮೀ. ಹಾಗೂ 49.9 ಕೆ.ಜಿ. ತೂಕ)
  • ಎದೆಯ ಸುತ್ತಳತೆ ಕನಿಷ್ಠ 81 ಸೆಂ.ಮೀ.
  • ಓಟ, ಎತ್ತರ ಜಿಗಿತ, ಉದ್ದ ಜಿಗಿತ ಹಾಗೂ ಗುಂಡೆಸೆತಗಳ ಮೂಲಕ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ.

ನೇಮಕಾತಿ ಪ್ರಕ್ರಿಯೆ

ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ, ಲಿಖಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳು ಹಾಗೂ ಮೀಸಲಾತಿ ನಿಯಮಗಳ ಅನ್ವಯ ಅರ್ಹರ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ

ಅಬಕಾರಿ ಉಪನಿರೀಕ್ಷಕರು: ಏಪ್ರಿಲ್‌ 30, 2017
ಅಬಕಾರಿ ರಕ್ಷಕರು: ಮೇ 7, 2017
ಸಾಮಾನ್ಯ ಅಧ್ಯಯನ, ಸಾಮಾನ್ಯ ಕನ್ನಡ ಅಥವಾ ಇಂಗ್ಲಿಷ್‌ ವಿಷಯಗಳ ಪರೀಕ್ಷೆ ನಡೆಸಲಾಗುತ್ತದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಪರೀಕ್ಷಾ ವೇಳಾಪಟ್ಟಿ

ಪರೀಕ್ಷಾ ವೇಳಾಪಟ್ಟಿಯನ್ನು ಹಾಗೂ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು, ಹೆಚ್ಚಿನ ಮಾಹಿತಿಯನ್ನು ಆನ್-ಲೈನ್ ವಿಳಾಸದಲ್ಲಿ ಪಡೆಯಿರಿ.

ಆನ್-ಲೈನ್ ವಿಳಾಸ: http://kpsc.kar.nic.in/index.html

For Quick Alerts
ALLOW NOTIFICATIONS  
For Daily Alerts

English summary
KPSC notification for the post of excise sub inspectors
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X