KPSC RDWSD Recruitment 2022 : 188 ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ಏ.18ರ ವರೆಗೆ ವಿಸ್ತರಣೆ

ಕರ್ನಾಟಕ ಲೋಕಸೇವಾ ಆಯೋಗವು 2022ನೇ ಸಾಲಿಗೆ ಗ್ರೂಪ್-ಬಿ ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಏಪ್ರಿಲ್ 18ರ ವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 188 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 28,2022 ರಿಂದ ಮಾರ್ಚ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 18,2022ರ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KPSC RDWSD ನೇಮಕಾತಿ 2022 ವಿದ್ಯಾರ್ಹತೆ :

KPSC RDWSD ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಹಾಕಲು ಇಚ್ಚಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಸಿವಿಲ್/ಎನ್ವಿರಾನ್ಮೆಂಟಲ್ ನಲ್ಲಿ ಬಿ.ಇ ಪದವಿ ಹೊಂದಿರಬೇಕು. ಇದನ್ನು ಹೊರತುಪಡಿಸಿ ಅನ್ಯ ರಾಜ್ಯ/ಸರ್ಕಾರ ಗುರುತಿಸಿರುವ ವಿಶ್ವವಿದ್ಯಾಲಯಗಳ ಪದವಿಗಳನ್ನು ಪರಿಗಣಿಸಲಾಗುವುದಿಲ್ಲ.

KPSC RDWSD ನೇಮಕಾತಿ 2022 ವಯೋಮಿತಿ :

KPSC RDWSD ನೇಮಕಾತಿ 2022 ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KPSC RDWSD ನೇಮಕಾತಿ 2022 ವೇತನ :

KPSC RDWSD ನೇಮಕಾತಿ 2022 ವೇತನ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ ವರೆಗೆ ವೇತನವನ್ನು ನೀಡಲಾಗುವುದು.

KPSC RDWSD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KPSC RDWSD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KPSC RDWSD ನೇಮಕಾತಿ 2022 ಅರ್ಜಿ ಶುಲ್ಕ :

KPSC RDWSD ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಮತ್ತು ಎಲ್ಲಾ ಅಭ್ಯರ್ಥಿಗಳು 35/-ರೂ ಪ್ರೊಸೆಸಿಂಗ್ ಶುಲ್ಕದ ಜೊತೆಗೆ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಏಪ್ರಿಲ್ 18,2022ರೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.

KPSC RDWSD ನೇಮಕಾತಿ 2022 ಅರ್ಜಿ ಸಲ್ಲಿಕೆ :

KPSC RDWSD ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kpsc.kar.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 18,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2022 notification has been released for 188 assistant engineer posts at rural drinking water and sanitation department. Application date extended to april 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+