KPSC RDWSD Recruitment 2022 : 288 ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು 2022ನೇ ಸಾಲಿಗೆ ಗ್ರೂಪ್-ಬಿ ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 288 ಸಹಾಯಕ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 288 ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್‌ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು (ಗ್ರೇಡ್‌-1) 129 ಹುದ್ದೆಗಳಿಗೆ 100 ಪೋಸ್ಟ್‌ಗಳನ್ನು ಸೇರಿಸಿ ಸೇರ್ಪಡೆ ಅಧಿಸೂಚನೆ ಹೊರಡಿಸಿದ್ದು, ಮತ್ತೆ ಅರ್ಜಿ ಕರೆಯಲಾಗಿದೆ.

ಇಲಾಖೆಯ ಗ್ರೂಪ್‌ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು (ಗ್ರೇಡ್‌-1) 129 ಹುದ್ದೆಗಳು ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ 59 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ 2022 ರ ಫೆಬ್ರುವರಿ 21 ರಂದು ಅಧಿಸೂಚನೆ ಪ್ರಕಟಿಸಿತ್ತು. ಸದರಿ ಹುದ್ದೆಗಳಿಗೆ ಈವರೆಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವುದಿಲ್ಲ. ಆದ್ದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಸ್ತಾವನೆ ಮೇರೆಗೆ 100 ಹುದ್ದೆಗಳನ್ನು ಸೇರಿಸಿ, ಮತ್ತೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹುದ್ದೆಗಳ ವರ್ಗೀಕರಣವನ್ನು, ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 2,2022 ರಿಂದ ಸೆಪ್ಟೆಂಬರ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KPSC RDWSD ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಸಿವಿಲ್/ಎನ್ವಿರಾನ್ಮೆಂಟಲ್ ನಲ್ಲಿ ಬಿ.ಇ ಪದವಿ ಹೊಂದಿರಬೇಕು. ಇದನ್ನು ಹೊರತುಪಡಿಸಿ ಅನ್ಯ ರಾಜ್ಯ/ಸರ್ಕಾರ ಗುರುತಿಸಿರುವ ವಿಶ್ವವಿದ್ಯಾಲಯಗಳ ಪದವಿಗಳನ್ನು ಪರಿಗಣಿಸಲಾಗುವುದಿಲ್ಲ.

KPSC RDWSD ನೇಮಕಾತಿ 2022 ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ ೪೫ ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KPSC RDWSD ನೇಮಕಾತಿ 2022 ವೇತನ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ ವರೆಗೆ ವೇತನವನ್ನು ನೀಡಲಾಗುವುದು.

KPSC RDWSD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KPSC RDWSD ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಕ್ಟೋಬರ್ 1,2022ರೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.

KPSC RDWSD ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಲೋಕಸೇವಾ ಆಯೋಗದಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kpsc.kar.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 2,2022 ರಿಂದ ಸೆಪ್ಟೆಂಬರ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2022 notification has been released for 288 assistant engineer posts at rural drinking water and sanitation department.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+