ಕೆಪಿಎಸ್ಸಿ: FDA, SDA ಹುದ್ದೆಗಳ ನೇಮಕಾತಿ

ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 9, 2017 ಕೊನೆಯ ದಿನವಾಗಿದೆ.

ವಿವಿಧ ಇಲಾಖೆಗಳಲ್ಲಿ ಇರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 9, 2017 ಕೊನೆಯ ದಿನವಾಗಿದೆ.

ಕೆಪಿಎಸ್ಸಿ ನೇಮಕಾತಿ

ಹುದ್ದೆಗಳ ವಿವರ

ಪ್ರಥಮ ದರ್ಜೆ ಸಹಾಯಕರು ಒಟ್ಟು ಹುದ್ದೆ 507
ವೇತನ ಶ್ರೇಣಿ : ರೂ. 14550-26700/-

ದ್ವಿತೀಯ ದರ್ಜೆ ಸಹಾಯಕರು ಒಟ್ಟು ಹುದ್ದೆ 551
ವೇತನ ಶ್ರೇಣಿ:ರೂ.1600-21000

ಶೈಕ್ಷಣಿಕ ವಿದ್ಯಾರ್ಹತೆ

ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ

ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ಸರ್ಕಾರವು ಅಂತಹ ಪರೀಕ್ಷೆಗೆ ಸಮಾನವೆಂದು ಅಂಗೀಕರಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
• ಟಿಪ್ಪಣಿ: ಡಿಪ್ಲೊಮಾ, ಹಿಂದಿ ಸಭಾಗಳಿಂದ ಪಡೆದ ರತ್ನಾ, ವಿಶಾರದ, ಪಂಡಿತ್ ಇತ್ಯಾದಿ ವಿದ್ಯಾರ್ಹತೆಗಳನ್ನು ಪದವಿಗೆ ತತ್ಸಮಾನವೆಂದು KCS (Recruitment to the Ministerial Post) Rule 1978 ರ ನಿಯಮಗಳಲ್ಲಿ ಅಧಿಸೂಚಿಸಿರುವುದಿಲ್ಲವಾದ್ದರಿಂದ, ಇವು ಪದವಿಗೆ ಸಮಾನವಾಗುವುದಿಲ್ಲ. ಆದ್ದರಿಂದ ಈ ವಿದ್ಯಾರ್ಹತೆಯ ಅಭ್ಯರ್ಥಿಗಳು ಸದರಿ ಹುದ್ದೆಗೆ ಅರ್ಹರಾಗುವುದಿಲ್ಲ.

ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಪದವಿ ಪೂರ್ವ ಪರೀಕ್ಷೆ ಅಥವಾ ತತ್ಸಮಾನ ವಿದ್ಯಾರ್ಹತೆಗಳಾದ ಐಟಿಐ ಮತ್ತು ಇತರೆ ಮೂರು ವರ್ಷದ ಡಿಪ್ಲೊಮೋ ಕೋರ್ಸ್.
• ಟಿಪ್ಪಣಿ: ಮುಕ್ತ ವಿಶ್ವವಿದ್ಯಾಲಯಗಳು ನಡೆಸುವ 10+2 ಪರೀಕ್ಷೆಯನ್ನು ಸದರಿ ಹುದ್ದೆಗೆ ನಿಗದಿತ ವಿದ್ಯಾರ್ಹತೆ ಎಂದು ಪರಿಗಣಿಸಲಾಗುವುದಿಲ್ಲ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಸೆಪ್ಟೆಂಬರ್ 1, 2017
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಅಕ್ಟೋಬರ್ 7, 2017
  • ಪರೀಕ್ಷೆ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ ಅಕ್ಟೋಬರ್ 9, 2017

ಪರೀಕ್ಷಾ ಶುಲ್ಕದ ವಿವರ

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರು. 300/-
  • ಪ್ರವರ್ಗ- 2(ಎ), 2(ಬಿ), 3(ಎ), 3(ಬಿ) ರು.150/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ವಯೋಮಿತಿ

  • ಸಾಮಾನ್ಯ ವರ್ಗ: 35 ವರ್ಷ
  • ಪ್ರವರ್ಗ- 2(ಎ), 2(ಬಿ), 3(ಎ), 3(ಬಿ): 38 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1: 40 ವರ್ಷ

ಅರ್ಜಿಗಳನ್ನು ಆಯೋಗದ ಅಂತರ್ಜಾಲ www.kpsc.kar.nic.in ನಲ್ಲಿ ಆನ್-ಲೈನ್ ಮೂಲಕ ಭರ್ತಿ ಮಾಡಿ ಪರೀಕ್ಷಾ ಶುಲ್ಕವನ್ನು ದಿನಾಂಕ: 04-09-2017ರಿಂದ ಅಂಚೆ ಕಛೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿಪಾವತಿ ಮಾಡಬಹುದು. ಈ ಸೌಲಭ್ಯಗಳನ್ನು ಹೊರತುಪಡಿಸಿ, ಇತರೆ ಯಾವುದೇ ರೀತಿಯಲ್ಲಿ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ. ಮತ್ತು ಶುಲ್ಕವನ್ನು ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆನ್-ಲೈನ್ ಮೂಲಕ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ ಯಾವುದಾದರೂ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) ಸಂಖ್ಯೆ. 9986739013, 9986736594, 9986760557, 8197367453 ಅನ್ನು ಸಂಪರ್ಕಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
KPSC announce notification for 507 FDA posts, 551 SDA posts. October 7, 2017 is the last date to submit application.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X