KPSC: 1,279 ಕಿರಿಯ ಸಹಾಯಕ /ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ

ಕರ್ನಾಟಕ ಲೋಕ ಸೇವಾ ಆಯೋಗ 2019-20ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ /ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅಭ್ಯರ್ಥಿಗಳು ಇಂದಿನಿಂದ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆಯು ಒಟ್ಟು 1,279 ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಅಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಜೂನ್ 1,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ

1,279 ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್ಸಿ

ಹುದ್ದೆಗಳ ವಿವರ:

ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ = 199 ಹುದ್ದೆಗಳು
ಉಳಿಕೆ ಮೂಲಕ ವೃಂದದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ (ನಾನ್ ಹೈದರಾಬಾದ್ ಕರ್ನಾಟಕ ) = 1080 ಹುದ್ದೆಗಳು
ಒಟ್ಟು = 1,279 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ:

ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ/ತತ್ಸಮಾನ ವಿದ್ಯಾರ್ಹತೆ, ಸಿಬಿಎಸ್‌ಇ ಮತ್ತು ಐಎಸ್‌ಸಿ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ, ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ /ಹೆಚ್‌.ಎಸ್‌.ಸಿ, ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್‌.ಡಿ.ಸಿ) ಅಭ್ಯರ್ಥಿಗಳು ಎನ್‌.ಐ.ಒ.ಎಸ್‌.ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಬಹುದು.

ಟಿಪ್ಪಣಿ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ದಿನಾಂಕದಂದು ಆಯಾ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಈ ನಿಗದಿತ ವಿದ್ಯಾರ್ಹತೆಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ವಯೋಮಿತಿ:

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ- 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯತಕ್ಕದ್ದು.

ವೇತನ ಶ್ರೇಣಿ:

ಕಿರಿಯ ಸಹಾಯಕ / ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷಾ ದಿನಾಂಕಗಳು:

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ: ಜೂನ್ 6,2020
ಮತ್ತು ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ: ಜೂನ್ 7,2020

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 9,2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 1,2020
ಪರೀಕ್ಷೆ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: ಜೂನ್ 2,2020

ಪರೀಕ್ಷಾ ಶುಲ್ಕದ ವಿವರ:

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 600/-ರೂ+35ರೂ
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300/-ರೂ+35/-ರೂ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50+35/-ರೂ
ಪರಿಶಿಷ್ಟ ಜಾತಿ,ಪರಿಶಿಷ್ಟ,ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ ಆದರೆ ಪ್ರೊಸೆಸಿಂಗ್ ಚಾರ್ಚ್ 35/-ರೂ ಅನ್ನು ಎಲ್ಲಾ ಅಭ್ಯರ್ಥಿಗಳು ಪಾವತಿಸಲೇಬೇಕು. ಶುಲ್ಕವನ್ನು ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

1,279 ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್ಸಿ

ಅರ್ಜಿ ಸಲ್ಲಿಸುವ ಪ್ರಕ್ರಿಯೆ:

ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಆಯೋಗದ ಅಂತರ್ಜಾಲ http://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 1,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಆನ್-ಲೈನ್ ಮೂಲಕ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ ಯಾವುದಾದರೂ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) ಸಂಖ್ಯೆ. 7406086807 / 7406086801 ಅನ್ನು ಸಂಪರ್ಕಿಸಬಹುದು.
ಸಂಬಂಧಿತ ಶಾಖೆಯ ದೂರವಾಣಿ ಸಂಖ್ಯೆ: 080-30574939

ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಉಳಿಕೆ ಮೂಲಕ ವೃಂದದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2019-20 notification has been released in official website for the recruitment of 1279 junior/second division assistant posts. Interested candidates can apply through online before 1st June 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+