ಕರ್ನಾಟಕ ಲೋಕ ಸೇವಾ ಆಯೋಗ ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಉಳಿಕೆ ಮೂಲ ವೃಂದದ ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಒಟ್ಟು 844 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕ |
Organisation | ಕರ್ನಾಟಕ ಲೋಕ ಸೇವಾ ಆಯೋಗ |
Educational Qualification | ಪದವಿ,ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
Job Location | ಕರ್ನಾಟಕ |
Salary Scale | ಪ್ರಥಮ ದರ್ಜೆ ಸಹಾಯಕರ -27,650/- ರಿಂದ 52,650/-ರೂ, ದ್ವಿತೀಯ ದರ್ಜೆ ಸಹಾಯಕರು- 21,400/- ರಿಂದ 42,000/- ರೂ |
Application Start Date | February 11, 2019 |
Application End Date | March 12, 2019 |
ಶೈಕ್ಷಣಿ ವಿದ್ಯಾರ್ಹತೆ:
ಅರ್ಜಿಗಳನ್ನು ಭರ್ತಿಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
(1) ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ:
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ಸರ್ಕಾರವು ಅಂತಹ ಪರೀಕ್ಷೆಗೆ ಸಮಾನವೆಂದು ಅಂಗೀಕರಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
(2) ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ:
ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಖಾಲಿ ಹುದ್ದೆಗಳ ವಿವರ:
ಹುದ್ದೆಗಳು | ಪ್ರಥಮ ದರ್ಜೆ ಸಹಾಯಕರು | ದ್ವಿತೀಯ ದರ್ಜೆ ಸಹಾಯಕರು |
ಒಟ್ಟು | 219 | 494 |
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿ:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ | 35ವರ್ಷಗಳು |
ಪ್ರವರ್ಗ- 2A/2B/3A/3Bಅಭ್ಯರ್ಥಿಗಳಿಗೆ | 38ವರ್ಷಗಳು |
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ | 40ವರ್ಷಗಳು |
ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವ ವೇತನದ ವಿವರ ಇಲ್ಲಿದೆ
(1) ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ: 27,650/- ರಿಂದ 52,650/-ರೂ ವೇತನ
(2) ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ - 21,400/- ರಿಂದ 42,000/- ರೂ ವೇತನ
ನೇಮಕಾತಿ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಕಕ ಪರೀಕ್ಷೆ ಮೂಲಕ ನೇಮಕಾತಿ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ,ಸಾಮಾನ್ಯ ಕನ್ನಡ/ ಸಾಮಾನ್ಯ ಇಂಗ್ಲೀಷ್ ಮತ್ತು ಸಾಮಾನ್ಯ ಜ್ಞಾನವನ್ನು ಒಳಗೊಂಡಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಭರ್ತಿ ಮಾಡಿ, ಭಾವಚಿತ್ರ / ಸಹಿ ವಯೋಮಿತಿ / ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಪರೀಕ್ಷಾ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಅಥವಾ Common Service Centreನಲ್ಲಿ (CSC) ಪಾವತಿ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾಔತಿಸದೇ ಹಾಗೂ ದಾಖಲೆಗಳನ್ನು ಭಾವಚಿತ್ರ / ಸಹಿಯನ್ನು ಅಪ್ಲೋಡ್ ಮಾಡದೇ ಇರುವ / ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. Common Service Centreನಲ್ಲಿ (CSC) ಪಾವತಿಸಲು ಅವಕಾಶವಿರುವುದರಿಂದ, ಈ ಕೇಂದ್ರಗಳಲ್ಲಿಯೂ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ | ರೂ.600/- |
ಪ್ರವರ್ಗ2(A),2(B),3(A),3(B) ಗೆ ಸೇರಿದ ಅಭ್ಯರ್ಥಿಗಳಿಗೆ | ರೂ.300/- |
ಮಾಜಿ ಸೈನಿಕ ಅಭ್ಯರ್ಥಿಗಳಿಗೆ (ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ2(A),2(B),3(A),3(B) ಗೆ ಸೇರಿದವರಿಗೆ) | ರೂ.50/- |
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ಮಾತ್ರ ವಿನಾಯಿತಿ ಇದೆ. ಆದರೆ ಇವರು Application process charges ಪಾವತಿಸಬೇಕು. ಅರ್ಜಿಶುಲ್ಕವನ್ನು ಪಾವತಿಸಲು 13.3.2019 ಕೊನೆಯ ದಿನವಾಗಿದೆ.
ಈ ಹುದ್ದೆಗಳ ಅಪ್ ಡೇಟ್ಸ್ ಗಳನ್ನುಅಧಿಕೃತ ವೆಬ್ ಸೈಟ್ ನಲ್ಲಿ ವೀಕ್ಷಿಸಿ. ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ