ಕರ್ನಾಟಕ ಲೋಕ ಸೇವಾ ಆಯೋಗ 2019-2020ನೇ ಸಾಲಿನ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಆಯೋಗವು ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಫೆಬ್ರವರಿ 29 ರಂದು ಹೊರಡಿಸಲಾದ ಅಧಿಸೂಚನೆಗಳಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 9,2020 ಮತ್ತು ಶುಲ್ಕ ಪಾವತಿಸುವ ಕೊನೆಯ ದಿನಾಂಕ ಏಪ್ರಿಲ್ 13,2020 ಎಂದು ನಿಗದಿಪಡಿಸಲಾಗಿತ್ತು.
KPSC: 1,279 ಕಿರಿಯ ಸಹಾಯಕ /ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ
ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ (ಕೋವಿಡ್-19) ವೈರಾಣು ಹರಡುವಿಕೆಯನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಹೊರಡಿಸಿರುವ ವಿವಿಧ ಆದೇಶಗಳನ್ವಯ, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 30,2020ರ ವರೆಗೆ ಮತ್ತು ಶುಲ್ಕ ಪಾವತಿಸಲು ಮೇ 2,2020ರ ವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
For Daily Alerts