KPSC Recruitment 2020: 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ 2019-20ನೇ ಸಾಲಿನ ಗ್ರೂಪ್ -"ಎ" ವೃಂದದ 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು 2 ವರ್ಷಗಳ ಡಿಪ್ಲೋಮಾ ಕೋರ್ಸ್ ಇನ್ ಫಾರೆಸ್ಟ್ರಿ ತರಬೇತಿಗಾಗಿ ಆಯ್ಕೆ ಮಾಡಲು ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಎಸ್ಸಿಯಲ್ಲಿ ಉದ್ಯೋಗಾವಕಾಶ...ನ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಎಸ್ಸಿ ಪದವಿ ಮತ್ತು ಬಿ.ಎಸ್ಸಿ ಪದವಿ ಹೊರತುಪಡಿಸಿ ಇತರೆ ವಿಜ್ಞಾನ/ಇಂಜಿನಿಯರಿಂಗ್ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು. ಗರಿಷ್ಟ 30 ವರ್ಷದೊಳಗಿನ ಸಾಮಾನ್ಯ, ಗರಿಷ್ಟ 33 ವರ್ಷದೊಳಗಿನ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 35 ವರ್ಷದೊಳಗಿನ ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಗ್ರೂಪ್ 'ಎ' ವೃಂದದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.

ಪ್ರಮುಖ ದಿನಾಂಕಗಳು:

ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅಕ್ಟೋಬರ್ 20,2020
ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 20,2020
ಪೂರ್ವಭಾವಿ ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 21,2020

ಪರೀಕ್ಷಾ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಗಳನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರುತ್ತದೆ.
ವಿಶೇಷ ಸೂಚನೆ: 35/-ರೂ ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2020 notification has been released for 16 assistant conservator of forest posts. Interested candidates can apply through online before November 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+