KPSC Recruitment 2020: 21 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕ ಸೇವಾ ಆಯೋಗ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ -ಕರ್ನಾಟಕ ವೃಂದದಲ್ಲಿನ ಗ್ರೂಪ್ "ಎ" ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಯೋಗವು ಒಟ್ಟು 21 ಸಹಾಯಕ ನಿರ್ದೇಶಕರು ಹುದ್ದೆಗಳನ್ನು ಭರ್ತಿಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 10,2020 ರಿಂದ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಪಿಎಸ್ಸಿಯಲ್ಲಿ 21 ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಹಾಯಕ ನಿರ್ದೇಶಕರು
Organisation ಕರ್ನಾಟಕ ಲೋಕ ಸೇವಾ ಆಯೋಗ
Educational Qualification ಬಿಇ/ಬಿ.ಟೆಕ್ ಇನ್ ಸಿವಿಲ್ /ಆರ್ಕಿಟೆಕ್ಚರ್ ಇಂಜಿನಿಯರಿಂಗ್; ಸ್ನಾತಕೋತ್ತರ ಪದವಿ/ಡಿಪ್ಲೋಮಾ ಇನ್ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ /ಅರ್ಬನ್ ಡಿಸೈನ್ /ಅರ್ಬನ್ ಪ್ಲಾನಿಂಗ್ ಅಥವಾ ಸಿಟಿ ಪ್ಲಾನಿಂಗ್ ಅಥವಾ ಲ್ಯಾಂಡ್‌ಸ್ಕೇಪ್ ಆರ್ಕಿಟೆಕ್ಚರ್ / ಟ್ರಾನ್ಸ್ ಪೋರ್ಟೇಶನ್ ಪ್ಲಾನಿಂಗ್
Job Location ಕರ್ನಾಟಕ
Salary Scale ತಿಂಗಳಿಗೆ 52,650/- ರಿಂದ 97,100/-ರೂ
Application Start Date July 10, 2020
Application End Date August 10, 2020

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕೆಳಗೆ ತಿಳಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
*ಸಿವಿಲ್ ಇಂಜಿನಿಯರಿಂಗ್ ಅಥವಾ ಆರ್ಕಿಟೆಕ್ಚರ್ ನಲ್ಲಿ ಪದವಿ ವಿದ್ಯಾರ್ಹತೆ
*ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಇನ್ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ ಅಥವಾ ಅರ್ಬನ್ ಡಿಸೈನ್ ಅಥವಾ ಅರ್ಬನ್ ಪ್ಲಾನಿಂಗ್ ಅಥವಾ ಸಿಟಿ ಪ್ಲಾನಿಂಗ್ ಅಥವಾ ಲ್ಯಾಂಡ್‌ಸ್ಕೇಪ ಆರ್ಕಿಟೆಕ್ಚರ್ ಅಥವಾ ಟ್ರಾನ್ಸ್ ಪೋರ್ಟೇಶನ್ ಪ್ಲಾನಿಂಗ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಟ 35 ವರ್ಷದೊಳಗಿನವರಾಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ. ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.

ನೇಮಕಾತಿ ವಿಧಾನ:

ಅರ್ಜಿದಾರರನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಅಥವಾ ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಆಗಸ್ಟ್ 11,2020ರೊಳಗೆ ಪಾವತಿಸಬೇಕಿರುತ್ತದೆ.

ಸೂಚನೆ: 35/-ರೂ ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ) ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆಯ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ http://www.kpsc.kar.nic.in/indexk.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2020 notificaiton has been released for the recruitment of 21 assistant director posts. Interested candidates can apply through online from july 10 to August 10
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+