KPSC Recruitment 2020: 251 ಗ್ರೂಪ್ 'ಎ' ಮತ್ತು 'ಬಿ' ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕ ಸೇವಾ ಆಯೋಗ 251 ಗ್ರೂಪ್ "ಎ" ತಾಂತ್ರಿಕ ಮತ್ತು ಗ್ರೂಪ್ "ಬಿ" ತಾಂತ್ರಿಕ /ತಾಂತ್ರಿಕೇತರ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಕೆಪಿಎಸ್ಸಿಯಲ್ಲಿ 251 ಹುದ್ದೆಗಳ ನೇಮಕಾತಿ

ಆಯೋಗವು ಒಟ್ಟು 251 ಹುದ್ದೆಗಳನ್ನು ಭರ್ತಿಮಾಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಆನ್‌ಲೈನ್ ಮೂಲಕ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಪದವಿ; ಬಿ.ಇ/ಬಿ.ಟೆಕ್ ಪದವಿ; ಬಿ.ಫಾರ್ಮಾ/ಎಂ.ಫಾರ್ಮಾ; ಸ್ನಾತಕೋತ್ತರ ಪದವಿ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಖಾಲಿ ಹುದ್ದೆಗಳ ವಿವರ:

ಕೆಪಿಎಸ್ಸಿಯಲ್ಲಿ 251 ಹುದ್ದೆಗಳ ನೇಮಕಾತಿ


ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರಬೇಕು.

ವೇತನದ ವಿವರ:

ಕೆಪಿಎಸ್ಸಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ ವೇತನವನ್ನು ನೀಡಲಾಗುವುದು.

ನೇಮಕಾತಿ ವಿಧಾನ:

ಅರ್ಜಿದಾರರನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಅಥವಾ ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಆಗಸ್ಟ್ 11,2020ರೊಳಗೆ ಪಾವತಿಸಬೇಕಿರುತ್ತದೆ.

ಸೂಚನೆ: 35/-ರೂ ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ) ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆಯ ವಿವರ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ http://www.kpsc.kar.nic.in/indexk.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 10 ರಿಂದ ಆಗಸ್ಟ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2020 notificaiton has been released for the recruitment of 251 group a and b posts. Interested candidates can apply through online from july 10 to August 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+