ಕರ್ನಾಟಕ ಲೋಕಸೇವಾ ಆಯೋಗವು ಆಯುಷ್ ನಿರ್ದೇಶಲನಾಲಯದಲ್ಲಿ ಉಳಿಕೆ ಮೂಲ ವೃಂದ ಮತ್ತು ಹೈಕ ವೃಂದದಲ್ಲಿ ಖಾಲಿ ಇರುವ 276 ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿನ ಆಯುರ್ವೇದ /ಹೋಮಿಯೋಪತಿ ವಿಷಯಗಳಲ್ಲಿ ಪ್ರಾಧ್ಯಾಪಕರು /ಸಹ ಪ್ರಾಧ್ಯಾಪಕರು /ಸಹಾಯಕ ಪ್ರಾಧ್ಯಾಪಕರು /ಶುಶ್ರೂಷಕರ ಗ್ರೂಪ್ -ಎ, ಬಿ ಮತ್ತು ಸಿ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 14,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಖಾಲಿ ಹುದ್ದೆಗಳ ವಿವರ:

ವಿದ್ಯಾರ್ಹತೆ:
ಗ್ರೂಪ್ -ಎ, ಬಿ ಮತ್ತು ಸಿ ಹುದ್ದೆಗಳಿಗೆ ಪಿಯುಸಿ/ಡಿಪ್ಲೋಮಾ; ಪದವಿ/ಸ್ನಾತಕೋತ್ತರ ಪದವಿ, ಬಿಎಎಂಎಸ್/ಬಿಹೆಚ್ಎಂಎಸ್/ಬಿಯುಎಂಎಸ್/ಬಿಎನ್ ವೈಎಸ್ ವಿದ್ಯಾರ್ಹತೆಯನ್ನು ಕಾನೂನಿನಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ಕೆಪಿಎಸ್ಸಿ ಗ್ರೂಪ್ -ಎ, ಬಿ ಮತ್ತು ಸಿ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 600/-ರೂ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಕಾಮನ್ ಸರ್ವೀಸ್ ಸೆಂಟರ್ ಅಥವಾ ಆನ್‌ಲೈನ್ ಮೂಲಕ ಸೆಪ್ಟೆಂಬರ್ 15,2020ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 12,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 14,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 15,2020
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಆಗಸ್ಟ್ 12,2020 ರಿಂದ ಸೆಪ್ಟೆಂಬರ್ 14,2020ರೊಳಗೆ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











