KPSC Recruitment 2020: 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ 523 ವಿವಿಧ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಪಿಎಸ್ಸಿ ಯಲ್ಲಿ 523 ಹುದ್ದೆಗಳ ನೇಮಕಾತಿ..ಸೆ.19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಕೆಪಿಎಸ್ಸಿ ವಿವಿಧ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/-ರಿಂದ 70,850/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 600/-ರೂ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಕಾಮನ್ ಸರ್ವೀಸ್ ಸೆಂಟರ್ ಅಥವಾ ಆನ್‌ಲೈನ್ ಮೂಲಕ ಸೆಪ್ಟೆಂಬರ್ 21,2020ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 20,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 19,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 21,2020

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಆಗಸ್ಟ್ 20,2020 ರಿಂದ ಸೆಪ್ಟೆಂಬರ್ 19,2020ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2020 notification has been released for the recruitment of 523 group c non technical posts. Interested candidates can apply through online before september 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+