KPSC Recruitment 2020: 990 ಗ್ರೂಪ್ ಬಿ ಮತ್ತು ಗ್ರೂಪ್ ಸಿ ವೃಂದದ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿನ 990 ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೆಪಿಎಸ್ಸಿ ಯಲ್ಲಿ 990 ಹುದ್ದೆಗಳ ನೇಮಕಾತಿ..ಸೆ.16ರೊಳಗೆ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 16,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಪದವಿ/ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಕೆಪಿಎಸ್ಸಿ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ ಮತ್ತು ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 600/-ರೂ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಕಾಮನ್ ಸರ್ವೀಸ್ ಸೆಂಟರ್ ಅಥವಾ ಆನ್‌ಲೈನ್ ಮೂಲಕ ಸೆಪ್ಟೆಂಬರ್ 18,2020ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 17,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 18,2020

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಆಗಸ್ಟ್ 17,2020 ರಿಂದ ಸೆಪ್ಟೆಂಬರ್ 16,2020ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
kpsc recruitment notification released for the recruitment of 990 group b and c technical posts in kannada. Interested candidates can apply through online before september 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X