KPSC Recruitment 2022 : 169 ಕಿರಿಯ ಅಭಿಯಂತರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಜಲ ಸಂಪನ್ಮೂಲ ಇಲಾಖೆಯಲ್ಲಿನ ಗ್ರೂಪ್‌ 'ಸಿ' ವೃಂದದ 169 ಕಿರಿಯ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೆಪಿಎಸ್ಸಿಯಲ್ಲಿ 169 ಕಿರಿಯ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಅಕ್ಟೋಬರ್ 19,2022 ರಿಂದ ನವೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KPSC ನೇಮಕಾತಿ 2022 ವಿದ್ಯಾರ್ಹತೆ :

KPSC ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಕಿರಿಯ ಅಭಿಯಂತರರು ಹುದ್ದೆಗಳಿಗೆ ಸಿವಿಲ್/ಎನ್ವಿರಾನ್ಮೆಂಟ್/ಪಿಹೆಚ್ಇ ಯಲ್ಲಿ ಡಿಪ್ಲೋಮಾ ಅಥವಾ ಸಿವಿಲ್/ಎನ್ವಿರಾನ್ಮೆಂಟಲ್ ನಲ್ಲಿ ಬಿ.ಇ ಪದವಿ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KPSC ನೇಮಕಾತಿ 2022 ವಯೋಮಿತಿ :

KPSC ನೇಮಕಾತಿ 2022 ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಕಿರಿಯ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KPSC ನೇಮಕಾತಿ 2022 ವೇತನ :

KPSC ನೇಮಕಾತಿ 2022 ವೇತನ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಕಿರಿಯ ಅಭಿಯಂತರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಕಿರಿಯ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KPSC ನೇಮಕಾತಿ 2022 ಅರ್ಜಿ ಶುಲ್ಕ :

KPSC ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಕಿರಿಯ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ನವೆಂಬರ್ 18,2022ರೊಳಗೆ ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಕಿರಿಯ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 19,2022 ರಿಂದ ನವೆಂಬರ್ 17,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2022 notification has been released for 169 junior engineer posts. Interested candidates can apply before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+