ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ) ಗ್ರೂಪ್ 'ಸಿ' ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 410 ಕಿರಿಯ ಅಭಿಯಂತರರು, ಕಿರಿಯ ಆರೋಗ್ಯ ನಿರೀಕ್ಷಕರು, ಎಲೆಕ್ಟ್ರೀಷಿಯನ್, ನೀರು ಸರಬರಾಜು ಆಪರೇಟರ್ ಮತ್ತು ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 31,2022 ರಿಂದ ಏಪ್ರಿಲ್ 29,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KPSC ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ 'ಗ್ರೂಪ್ ಸಿ' ವೃಂದದ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ, ಪಿಯುಸಿ, ಐಟಿಐ ವಿದ್ಯಾರ್ಹತೆಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KPSC ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :
ಕಿರಿಯ ಅಭಿಯಂತರರು - 89 ಹುದ್ದೆಗಳು
ಕಿರಿಯ ಆರೋಗ್ಯ ನಿರೀಕ್ಷಕರು - 57 ಹುದ್ದೆಗಳು
ಎಲೆಕ್ಟ್ರೀಷಿಯನ್ - 12
ನೀರು ಸರಬರಾಜು ಆಪರೇಟರ್ - 89
ಸಹಾಯಕ ನೀರು ಸರಬರಾಜು ಆಪರೇಟರ್ - 163
ಒಟ್ಟು 410 ಹುದ್ದೆಗಳು
KPSC ನೇಮಕಾತಿ 2022 ವಯೋಮಿತಿ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ 'ಗ್ರೂಪ್ ಸಿ' ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KPSC ನೇಮಕಾತಿ 2022 ವೇತನ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ 'ಗ್ರೂಪ್ ಸಿ' ವೃಂದದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 62,600/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ 'ಗ್ರೂಪ್ ಸಿ' ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KPSC ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ 'ಗ್ರೂಪ್ ಸಿ' ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 30,2022ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
KPSC ನೇಮಕಾತಿ 2022 ಪ್ರಮುಖ ದಿನಾಂಕಗಳು :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಗ್ರೂಪ್ 'ಸಿ' ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು ಇಲ್ಲಿವೆ.
ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ : ಮಾರ್ಚ್ 31,2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 29,2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 30,2022
KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಗ್ರೂಪ್ 'ಸಿ' ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 31,2022 ರಿಂದ ಏಪ್ರಿಲ್ 29,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











