ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 26 ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 14,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ (ಸಿವಿಲ್) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ :
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಾಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಅರ್ಹತೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 35,000/-ರೂಗಳ ವೆರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಸುವುದು ಹೇಗೆ :
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹಿರಿಯ ಮತ್ತು ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://konkanrailway.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ನಂತರ ಅಗತ್ಯ ದಾಖಲೆಗಳೊಂದಿಗೆ ಮೇ 14ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ :
USBRL Project Head Office, Konkan Railway Corporation Ltd., Satyam Complex, Marble Market, Extension - Trikuta Nagar, Jammu, Jammu & Kashmir (U.T), Pin - 180011.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











