ಕೆ ಆರ್ ಐ ಡಿ ಎಲ್ ವಿವಿಧ ಹುದ್ದೆಗಳ ನೇಮಕಾತಿಗೆ ಆನ್-ಲೈನ್ ಅರ್ಜಿ ಆಹ್ವಾನ

ಕೆಆರ್ಐಡಿಎಲ್ ನಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಐಟಿಐ, ಪಿಯುಸಿ, ಬಿಎಸ್ಸಿ, ಬಿ.ಕಾಂ, ಬಿ.ಟೆಕ್, ಬಿ.ಇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರೂರಲ್ ಇನ್ ಪ್ರಾಸ್ಟ್ರಕ್ಚರ್ ಡೆವೆಲಪ್ಮೆಂಟ್ ಲಿಮಿಟಿಡ್ (ಕೆಆರ್ ಐಡಿಎಲ್) ನಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 91 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಐಟಿಐ, ಪಿಯುಸಿ, ಬಿಎಸ್ಸಿ, ಬಿ.ಕಾಂ, ಬಿ.ಟೆಕ್, ಬಿ.ಇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೆ ಆರ್ ಐ ಡಿ ಎಲ್  ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : 17 ಹುದ್ದೆಗಳು
ವೇತನ ಶ್ರೇಣಿ: 22800-43200/-
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಇ (ಸಿವಿಲ್) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು

ಸಹಾಯಕ ಅಭಿಯಂತರರು ಗ್ರೇಡ್-1 (ಎಲೆಕ್ಟ್ರಿಕಲ್): 1ಹುದ್ದೆ
ವೇತನ ಶ್ರೇಣಿ: 22800-43200/-
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಇ (ಎಲೆಕ್ಟ್ರಿಕಲ್) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು

ಸಹಾಯಕ ವಾಸ್ತುಶಿಲ್ಪ ಅಭಿಯಂತರರು ಗ್ರೇಡ್-1 (ವಾಸ್ತುಶಿಲ್ಪ): 1 ಹುದ್ದೆ
ವೇತನ ಶ್ರೇಣಿ: 22800-43200/-
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಆರ್ಕ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಕಿರಿಯ ಅಭಿಯಂತರರು (ಸಿವಿಲ್) : 11 ಹುದ್ದೆಗಳು
ವೇತನ ಶ್ರೇಣಿ: 17650-32000/-
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ತಾಂತ್ರಿಕ ಮಂಡಳಿಯಿಂದ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಅಧೀಕ್ಷಕರು (ಲೆಕ್ಕಪತ್ರ)-08 ಹುದ್ದೆಗಳು
ವೇತನ ಶ್ರೇಣಿ: ರೂ.20000-36300/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಎಂ.ಎಸ್ ಆಫೀಸ್ ಹಾಗೂ ಟ್ಯಾಲಿ ಪರಿಜ್ಞಾನ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕರು-07 ಹುದ್ದೆಗಳು
ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿಶ್ವವಿದ್ಯಾಲಯದಿಂದ ಯಾವುದಾದರು ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಎಂ.ಎಸ್ ಆಫೀಸ್, ಎಂ.ಎಸ್ ಎಕ್ಸಿಲ್ ಹಾಗೂ ಟ್ಯಾಲಿ ಪರಿಜ್ಞಾನ ಹೊಂದಿರಬೇಕು.

ದ್ವಿತೀಯ ದರ್ಜೆ ಸಹಾಯಕರು-17 ಹುದ್ದೆಗಳು
ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ತಾಂತ್ರಿಕ ಮಂಡಳಿಯಿಂದ ಪಿಯುಸಿ ಅಥವಾ ೧೦+೨ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಎಂ.ಎಸ್ ಆಫೀಸ್, ಎಂ.ಎಸ್ ಎಕ್ಸಿಲ್ ಹಾಗೂ ಟ್ಯಾಲಿ ಪರಿಜ್ಞಾನ ಹೊಂದಿರಬೇಕು.

ಸಹಾಯಕ ಕಾರ್ಯ ನಿರೀಕ್ಷಕರು-29 ಹುದ್ದೆಗಳು
ವೇತನ ಶ್ರೇಣಿ: ರೂ.10400-16400/-
ವಿದ್ಯಾರ್ಹತೆ : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ತಾಂತ್ರಿಕ ಮಂಡಳಿಯಿಂದ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ

ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/-

ಪ್ರಮುಖ ದಿನಾಂಕಗಳು

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಪ್ರಾರಂಭ ದಿನಾಂಕ: 25-10-2017
  • ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ: 24-11-2017
  • ಅಂಚೆ ಕಛೇರಿ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-11-2017

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Rural Infrastructure Development Limited (KRIDL)invites online applications from eligible candidates to fill 91 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+