ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ 15 ವಿವಿಧ ಹುದ್ದೆಗಳಿಗೆ ನ. 5 ಮತ್ತು 6ಕ್ಕೆ ನೇರ ಸಂದರ್ಶನ

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ 15 ಜಿಲ್ಲಾ ಮೇಲ್ವಿಚಾರಕ, ಹಣಕಾಸು ಸಹಾಯಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 5 ಮತ್ತು 6 ರಂದು ನೇರ ಸಂದರ್ಶನವನ್ನು ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ 15 ವಿವಿಧ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಜಿಲ್ಲಾ ಮೇಲ್ವಿಚಾರಕ,ಹಣಕಾಸು ಸಹಾಯಕ,ಸಹಾಯಕ ನಿರ್ದೇಶಕ
Organisation ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ
Educational Qualification ಪೋಸ್ಟ್ ಗ್ರಾಜುಯೇಟ್ ಪದವಿ,ಸ್ನಾತಕೋತ್ತರ ಪದವಿ,ಎಂಬಿಎ,ಗ್ರಾಜುಯೇಟ್/ಬಿ.ಕಾಂ,ಡಿಪ್ಲೋಮಾ
Job Location ಕರ್ನಾಟಕ
Salary Scale ಸಹಾಯಕ ನಿರ್ದೇಶಕ-ತಿಂಗಳಿಗೆ 25,000/-ರೂ, ಹಣಕಾಸು ಸಹಾಯಕ-ತಿಂಗಳಿಗೆ 17,000/-ರೂ, ಜಿಲ್ಲಾ ಮೇಲ್ವಿಚಾರಕ-ತಿಂಗಳಿಗೆ 16,200/-ರೂ
Application Start Date October 18, 2019
Application End Date November 5, 2019

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಪದವಿ,ಸ್ನಾತಕೋತ್ತರ ಪದವಿ,ಎಂಬಿಎ,ಗ್ರಾಜುಯೇಟ್/ಬಿ.ಕಾಂ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ, ಹಣಕಾಸು ಸಹಾಯಕ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ಮತ್ತು ಜಿಲ್ಲಾ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 16,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನವೆಂಬರ್ 5 ಮತ್ತು 6ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಯೋಜನಾ ನಿರ್ದೇಶಕರ ಕಚೇರಿ,
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ,
ಸರ್ ಸಿ.ವಿ. ರಾಮನ್ ಜನರಲ್ ಆಸ್ಪತ್ರೆ,
2 ನೇ ಮಹಡಿ, 80 ಅಡಿ ರಸ್ತೆ,
ಇಂದಿರಾನಗರ, ಬೆಂಗಳೂರು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಅಧಿಕೃತ ವೆಬ್‌ಸೈಟ್‌: https://ksaps.gov.in/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka state AIDS prevention society (KSAPS) going to conduct walk-in interview on 5th and 6th november for 15 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X