ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಚೇರಿಯಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರ ಮತ್ತು 3 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
10ನೇ ತರಗತಿ/ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, ಪ.ಜಾ/ಪ.ಪಂ/ಪ್ರ-1ರ ಗರಿಷ್ಟ 40 ವರ್ಷ,
2ಎ, 2ಬಿ, 3ಎ ಮತ್ತು ೩ಬಿಯ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬೆರಳಚ್ಚು ಪರೀಕ್ಷೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,350/- ರಿಂದ 58,250/-ರೂ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಪ್ರವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ 150/-ರೂ ಐಪಿಒ/ಡಿಡಿ ಮೂಲಕ ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560 009 ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್ಸೈಟ್ https://www.ksat.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿಗಳನ್ನು ಸಲ್ಲಿಸಬೇಕು. ಇತರೆ ಯಾವುದೇ ನಮೂನೆಗಳಲ್ಲಾಗಲೀ ಅಥವಾ ಬೆರಳಚ್ಚು/ಛಾಯ (ಫೋಟೋ) ಪ್ರತಿ ಮಾಡಿರುವ, ಕೈ ಬರಹದಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಕಚೇರಿ ವಿಳಾಸ:
ವಿಲೇಖನಾಧಿಕಾರಿ,
ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ ಪ್ರಾಧಿಕಾರ,
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ,
7ನೇ ಮಹಡಿ,
ಕೆ.ಜಿ ರಸ್ತೆ,
ಬೆಂಗಳೂರು-560 009.
ಅಭ್ಯರ್ಥಿಗಳು ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.