KSCCF Recruitment 2021: 45 ಲೆಕ್ಕಿಗರು, ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತದಲ್ಲಿ 45 ಲೆಕ್ಕಿಗರು, ಪ್ರಥಮ ದರ್ಜೆ ಗುಮಾಸ್ತರು, ವಿಕ್ರಯ ಸಹಾಯಕರು, ಬೆರಳಚ್ಚುಗಾರರು, ಜವಾನರು ಮತ್ತು ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತದಲ್ಲಿ 45 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಕಾಂ, ಪದವಿ, ಪಿಯುಸಿ, ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ ಮತ್ತು ಫಾರ್ಮಾಸಿಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 5,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಲೆಕ್ಕಿಗ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,000/- ರಿಂದ 34,500/-ರೂ,
ಪ್ರಥಮ ದರ್ಜೆ ಗುಮಾಸ್ತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,600/- ರಿಂದ 26,000/-ರೂ,
ವಿಕ್ರಯ ಸಹಾಯಕರು ಹಾಗೂ ಬೆರಳಚ್ಚುಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,500/- ರಿಂದ 24,000/-ರೂ, ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/- ರಿಂದ 16,400/-ರೂ ಮತ್ತು ಕಿರಿಯ ಫಾರ್ಮಾಸಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,550/- ರಿಂದ 26,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತದಲ್ಲಿ 45 ಹುದ್ದೆಗಳ ನೇಮಕಾತಿ

ಅರ್ಜಿ ಶುಲ್ಕ:

ಅರ್ಜಿದಾರರು 1,030/-ರೂ ಮತ್ತು ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 530/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಏಪ್ರಿಲ್ 6,2021ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ksccsf.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSCCF recruitment 2021 notification has been released for 45 accountant, fda and various posts. Interested candidates can apply through online before April 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+