ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕೃಷಿ ಬೆಲೆ ಆಯೋಗದಲ್ಲಿ ಕಾರ್ಯ ನಿರ್ವಹಿಸಲು ತಾಂತ್ರಿಕ ಸಲಹೆಗಾರರು, ಹೆಚ್ಚುವರಿ ತಾಂತ್ರಿಕ ಸಲಹೆಗಾರರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅ.16ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಕೃಷಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://raitamitra.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 16,2020ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
ಕೃಷಿ ಬೆಲೆ ಆಯೋಗ ಕಚೇರಿ,
ಕೃಷಿ ಆಯಿಕ್ತಾಲಯ ಆವರಣ,
ಶೇಷಾದ್ರಿರಸ್ತೆ,
ಬೆಂಗಳೂರು -01
ದೂರವಾಣಿ ಸಂಖ್ಯೆ: 080 22074118
ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











