ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ 5 ವಕೀಲ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು. ಅರ್ಹ ಅಭ್ಯರ್ಥಿಗಳು ಮೇ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಕೀಲ ಹುದ್ದೆಗಳಿಗೆ ಎಲ್‌ಎಲ್‌ಬಿ ಮತ್ತು ಎಲ್‌ಎಲ್‌ಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನೇಮಕಾತಿಯ ವಕೀಲ ಹುದ್ದೆಗಳಿಗೆ ಕನಿಷ್ಟ 30 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು ಕಿರಿಯ ವಕೀಲ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನ ಜೊತೆಗೆ 5,000/-ರೂಗಳ ಭತ್ಯೆಯನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌನ್ಸೆಲಿಂಗ್ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ :
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sslc.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 20,2022ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ :
Karnataka Secondary Education Examination Board, 06th Cross, Malleshwaram.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











