KSFC Recruitment 2021 : 5 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ 5 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಜುಲೈ 26ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 26,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಪ್ಟಿಟ್ಯೂಡ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ, ಪ.ಜಾ/ಪ.ಪಂ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 26,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The managing director,
KSFC head office,
No.1/1, Thimmaiah road,
Bengaluru-560052.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka state financial corporation recruitment 2021 notification has been released for 5 deputy manager posts. Interested candidates can apply before july 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X