ಕರ್ನಾಟಕ ರಾಜ್ಯ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ 10 ಶೀಘ್ರಲಿಪಿಗಾರ, ಕೋರ್ಟ್ ಅಧಿಕಾರಿ, ಸಹಾಯಕ ನಿಬಂಧಕರು, ತೀರ್ಪು ಬರಹಗಾರರು, ಕಾನೂನು ಸಹಾಯಕರು ಮತ್ತು ವಾಹನ ಚಾಲಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:
ಕಾನೂನು ಪದವಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಜುಲೈ 1,2021ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ [email protected] ವಿಳಾಸಕ್ಕೆ ಸೆಪ್ಟೆಂಬರ್ 4,2021 ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ತಲುಪುವಂತೆ ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kshrc.karnataka.gov.in/ ಗೆ ಭೇಟಿ ನೀಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











