ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ 5 ಪ್ರಾಜೆಕ್ಟ್ ಕನ್ಸಲ್ಟೆಂಟ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಪದವಿ ಮತ್ತು ಸ್ನಾತಕೋತ್ತ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಪ್ರಾಜೆಕ್ಟ್ ಕನ್ಸಲ್ಟೆಂಟ್ ಹುದ್ದೆಗೆ ಗರಿಷ್ಟ 35 ವರ್ಷ, ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಪ್ರಾಜೆಕ್ಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ, ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ಅಧಿಕೃತ ವೆಬ್‌ಸೈಟ್ https://kslsa.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











