ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (ಕೆಎಸ್ಎಂಸಿಎಲ್) 15 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹುದ್ದೆಗಳ ವಿವರ:
ಅಸಿಸ್ಟೆಂಟ್ ಮ್ಯಾನೇಜರ್ - 3 ಹುದ್ದೆಗಳು
ಮ್ಯಾನೇಜರ್ ಮೆಕ್ಯಾನಿಕಲ್ - 1 ಹುದ್ದೆ
ಮೈನ್ ಫೋರ್ ಮನ್ - 8 ಹುದ್ದೆಗಳು
ಮೈನ್‌ಮೇಟ್ - 3 ಹುದ್ದೆಗಳು
ಒಟ್ಟು 15 ಹುದ್ದೆಗಳು
ವಿದ್ಯಾರ್ಹತೆ:
ಇಂಜಿನಿಯರಿಂಗ್ ಪದವಿ, ಡಿಪ್ಲೋಮಾ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಹಾಜರಾಗಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 23 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನದ ವಿವರ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,300/- ರಿಂದ 32,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 19 ರಿಂದ 22,2020ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Corporate Office; TTMC,
'A' Block, 5th Floor,
BMTC Building,
K.H Road, Shantinagar,
Bengaluru - 560027.
ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (ಕೆಎಸ್ಎಂಸಿಎಲ್) ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











