ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ 15 ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಅಧ್ಯಕ್ಷರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 65,000/-ರೂ ಮತ್ತು ವಾಹನ ಭತ್ಯೆ 25,000/-ರೂ ಹಾಗೂ ಸದಸ್ಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಸಭೆಯ ಹಾಜರಾತಿಗೆ 2,000/-ರೂ ಮತ್ತು ವಾಹನ ಭತ್ಯೆಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://ksmha.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಹತಾ ನಿಯಮಗಳು, ಅರ್ಜಿ ನಮೂನೆ ಮತ್ತು ಇತರೆ ಷರತ್ತುಗಳ ವಿವರವನ್ನು ತಿಳಿದುಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 30,2021ರ ಸಂಜೆ 5 ಗಂಟೆಯೊಳಗೆ ಅಥವಾ ಅದಕ್ಕೂ ಮುಂಚಿತವಾಗಿ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಗುರುತಿನ ಪುರಾವೆ ಹಾಗೂ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು/ಆಯುಕ್ತರು -ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು,
5ನೇ ಮಹಡಿ, ಆರೋಗ್ಯ ಸೌಧ, 1ನೇ ಕ್ರಾಸ್, ಮಾಗಡಿ ರಸ್ತೆ,
ಬೆಂಗಳೂರು,
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.