Sub Inspector Recruitment 2022 : 63 ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್)ನಲ್ಲಿ ಖಾಲಿ ಇರುವ 63 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳು ಮತ್ತು ಸೇವಾನಿರತರನ್ನೊಳಗೊಂಡ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 63 ಹುದ್ದೆಗಳ ನೇಮಕಾತಿ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 10,2022 ರಿಂದ ಮಾರ್ಚ್ 3,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KSP ನೇಮಕಾತಿ 2022 ವಿದ್ಯಾರ್ಹತೆ :

KSP ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯುಜಿಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು.

KSP ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

KSP ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಖಾಲಿ ಹುದ್ದೆಗಳ ವಿವರ ಇಲ್ಲಿದೆ.

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಕೆಎಸ್‌ಐಎಸ್‌ಎಫ್‌) (ಪುರುಷ) - 40 ಹುದ್ದೆಗಳು
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಕೆಎಸ್‌ಐಎಸ್‌ಎಫ್‌) (ಮಹಿಳಾ) - 12 ಹುದ್ದೆಗಳು
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಕೆಎಸ್‌ಐಎಸ್‌ಎಫ್‌) (ಪುರುಷ) ಸೇವೆಯಲ್ಲಿರುವವರಿಗೆ - 7 ಹುದ್ದೆಗಳು
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಕೆಎಸ್‌ಐಎಸ್‌ಎಫ್‌) (ಮಹಿಳಾ) ಸೇವೆಯಲ್ಲಿರುವವರಿಗೆ - 2 ಹುದ್ದೆಗಳು
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಕೆಎಸ್‌ಐಎಸ್‌ಎಫ್‌) (ತೃತೀಯ ಲಿಂಗ) - 2 ಹುದ್ದೆಗಳು
ಒಟ್ಟು 63 ಹುದ್ದೆಗಳು

KSP ನೇಮಕಾತಿ 2022 ವಯೋಮಿತಿ :

KSP ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 3,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಸೇವಾ ನಿರತ ಅಭ್ಯರ್ಥಿಗಳಿಗೆ ಗರಿಷ್ಟ 35 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KSP ನೇಮಕಾತಿ 2022 ವೇತನ :

KSP ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KSP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KSP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSP ನೇಮಕಾತಿ 2022 ಅರ್ಜಿ ಶುಲ್ಕ :

KSP ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಮಾರ್ಚ್ 5,2022 ಕೊನೆಯ ದಿನವಾಗಿರುತ್ತದೆ.

KSP ನೇಮಕಾತಿ 2022 ಅರ್ಜಿ ಸಲ್ಲಿಕೆ :

KSP ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ನೇಮಕಾತಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://ksisfsi21.ksponline.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 10,2022ರ ಬೆಳಿಗ್ಗೆ 10 ರಿಂದ ಮಾರ್ಚ್ 3,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP KSISF recruitment 2022 notification has been released for 63 sub inspector posts. Interested candidates can apply before March 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+