ರಾಜ್ಯ ಪೊಲೀಸ್ ಇಲಾಖೆಯಲ್ಲಿ 1588 ಹುದ್ದೆಗಳ ನೇಮಕಾತಿ

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 30 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1588 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 30 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಪೊಲೀಸ್ ಇಲಾಖೆಯಲ್ಲಿ 1588 ಹುದ್ದೆಗಳ

ಹುದ್ದೆಗಳ ವಿವರ

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (ಸಿಎಆರ್ / ಡಿಎಆರ್) 1588 (ಬೆಂಗಳೂರು ನಗರ-1363, ಮೈಸೂರು ನಗರ-100, ಬೆಳಗಾವಿ ಜಿಲ್ಲೆ-50, ಮೈಸೂರು ಜಿಲ್ಲೆ-75)

ಇದನ್ನು ಗಮನಿಸಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 45 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) ಹುದ್ದೆಗಳ ಆಯ್ಕೆಯ ಸಲುವಾಗಿ ಕಂಡಿಕೆ 1ರಲ್ಲಿ ನಮೂದಿಸಿರುವ ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮ 2009ರ ಪ್ರಕಾರ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 30.08.2017 ಕ್ಕೆ ಹೊಂದಿರಬೇಕು.

(ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ:30.08.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ವಯೋಮಿತಿ

30/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 18ರಿಂದ 25, ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 18ರಿಂದ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ತರಬೇತಿ

ನೇಮಕಾತಿ ಹೊಂದಿದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿ ರವರು ಕಾಲ ಕಾಲಕ್ಕೆ ನಿರ್ದಿಷ್ಟ ಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ತರಬೇತಿಯನ್ನು ಪಡೆಯಬೇಕು. ತರಬೇತಿಯಲ್ಲಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. ಅನುತ್ತೀರ್ಣರಾದ ಅಭ್ಯರ್ಥಿಗಳನ್ನು ಸೇವೆಯಿಂದ ವಜಾಗೊಳಿಸಲಾಗುವುದು.

ಖಾಯಂಪೂರ್ವ ಅವಧಿ

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂಪೂರ್ವ ಅವಧಿಯಲ್ಲಿರುತ್ತಾರೆ.

ವೇತನ ಶ್ರೇಣಿ: ರೂ.11600-21000

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250/-
  • ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ರೂ.100/-

ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು. ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ತಪಾಸಣೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಗಮನಿಸಿ: ಯುನೈಟೆಡ್ ಇಂಡಿಯಾದಲ್ಲಿ 696 ಹುದ್ದೆಗಳ ನೇಮಕಾತಿ

ಪ್ರಮುಖ ದಿನಾಂಕಗಳು

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 16.08.2017, ಬೆಳಿಗ್ಗೆ 10.00 ಗಂಟೆಯಿಂದ
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.08.2017, ಸಂಜೆ 06.00 ಗಂಟೆಯವರೆಗೆ
• ಅಧಿಕೃತ ಬ್ಯಾಂಕ್ ಶಾಖೆಗಳ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 01.09.2017

ಹೆಚ್ಚಿನ ಮಾಹಿತಿಗಾಗಿ ksponline.co.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Karnataka State Police has advertised a notification for the recruitment of 1588 Armed Police Constable (Car/ Dar)-2017 vacancies. Eligible candidates can apply online from 16-08-2017 to 30-08-2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X